ತುಮಕೂರು

ಕಾಂಗ್ರೆಸ್‌ಗೆ ಇಂಟಕ್ ಬೆಂಬಲ

Published On :

ತುಮಕೂರು: ಜಿಲ್ಲೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ನ ಎಲ್ಲ ಅಭ್ಯರ್ಥಿಗಳಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಜಿಲ್ಲಾ ಶಾಖೆ ಬೆಂಬಲ ವ್ಯಕ್ತಪಡಿಸಿದೆ ಎಂದು ಜಿಲ್ಲಾ ಇನ್‌ಟಕ್ ಸಮಿತಿ ಅಧ್ಯಕ್ಷ ಬಿ.ಪಿ. ರಾಜು ತಿಳಿಸಿದ್ದಾರೆ.ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ (ಇಂಟಕ್) ರಾಜ್ಯ ಘಟಕದ ಅಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿಯ ಎನ್.ಎಂ. ಅಡ್ಯಂತಾಯ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಘಟಕದ ಅಧ್ಯಕ್ಷರಿಗೆ ಮತ್ತು ಕಾರ್ಯಕಾರಿ ಸಮಿತಿಯವರಿಗೆ ಆದೇಶ ನೀಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಗೆಲವು ಸಾಧಿಸಲು ಸಹಕಾರ ಬೆಂಬಲ ನೀಡಬೇಕೆಂದು ಆದೇಶಿಸಿದ್ದಾರೆ. ಅದರಂತೆ ತಾವು ಜಿಲ್ಲಾ ಇಂಟಕ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ತುಮಕೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ರಫೀಕ್ ಅಹಮದ್ ಅವರಿಗೆ ಮತ ನೀಡುವಂತೆ ಇಂಟಕ್ ಸದಸ್ಯರಿಗೆ ಕರೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾರ್ಯದರ್ಶಿ ಗಂಗಾಜಿನೇಯ, ಉಪಾದ್ಯಕ್ಷ ಕೆ.ಎಸ್. ಸೋಮಣ್ಣ, ಕಾರ್ಯದರ್ಶಿ ನಟರಾಜೇಗೌಡ, ಉಪಾಧ್ಯಕ್ಷ ಹುಚ್ಚಹನುಮಯ್ಯ, ನರಸಿಂಹಮೂರ್ತಿ, ಲಚ್ಚಣ್ಣ ಹಾಗೂ ಎಲ್ಲ ಪದಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಬಿಎಸ್‌ಆರ್ ಮುಖಂಡ ಕೆಜೆಪಿಗೆ
ತುರುವೇಕೆರೆ: ಕ್ಷೇತ್ರದ ಬಿಎಸ್‌ಆರ್ ಪಕ್ಷದ ಅಭ್ಯರ್ಥಿಯೆಂದು ಪ್ರಾರಂಭದಲ್ಲಿ ಬಿಂಬಿತವಾಗಿದ್ದ ಮಾಜಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಗೂ ಪಟ್ಟಣ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಚ್.ಆರ್. ರಾಮೇಗೌಡ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಎಸ್‌ಆರ್‌ಗೆ ಗುಡ್ ಬೈ ಹೇಳಿ ಕೆಜೆಪಿಗೆ ಸೇರ್ಪಡೆಯಾದರು.
ಪದಾಧಿಕಾರಿಗಳ ನೇಮಕ
ತುಮಕೂರು: ತುಮಕೂರು ನಗರ ಬಿಜೆಪಿ ಘಟಕಕ್ಕೆ ಕೆಳಕಂಡ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಘಟಕದ ಅಧ್ಯಕ್ಷ ಎಂ.ವೈ. ರುದ್ರೇಶ್ ತಿಳಿಸಿದ್ದಾರೆ. ನಗರ ಘಟಕದ ಉಪಾಧ್ಯಕ್ಷರಾಗಿ ವಿ.ಜಿ. ಭಗವಾನ್, ಕಾರ್ಯದರ್ಶಿಯಾಗಿ ಪಿ.ಜಿ. ರಮೇಶ್, ಯುವ ಮೋರ್ಚಾ ಕಾರ್ಯದರ್ಶಿಯಾಗಿಗಳಾಗಿ ಕಾಂತರಾಜು, ರಾಘವೇಂದ್ರ, ನಗರ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿ ಸೌರವ್ ಉದಯ್‌ಕುಮಾರ್, ನಗರ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿಯಾಗಿ ಸೈಯದ್ ನೂರಿ ಷಾ ಬುದ್ದೀನ್, ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿಯಾಗಿ ಹರೀಶ್ ಮೆಳೇಕೋಟೆ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.