ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಬಸ್ ವ್ಯವಸ್ಥೆ
ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನ ದಿನವಾದ ಮೇ 5 ರಂದು ವಿಧಾನಸಭಾ ಸೆಗ್ಮೆಂಟ್ಗಳಿಗೆ ನೇಮಕ ಮಾಡಲಾದ ಅಧಿಕಾರಿ ಸಿಬ್ಬಂದಿಗಳನ್ನು ಕಳುಹಿಸಿಕೊಡಲು ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಅಧಿಕಾರಿ ಸಿಬ್ಬಂದಿಗಳು ಸಕಾಲದಲ್ಲಿ ಆಗಮಿಸುವಂತೆ ತಪ್ಪಿದಲ್ಲಿ ತಡವಾಗಿ ಬಂದ ನೌಕರರಿಗೆ ಜಿಲ್ಲಾಡಳಿತ ಹೊಣೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸ್ ವ್ಯವಸ್ಥೆ: ವಿಧಾನಸಭಾ ಚುನಾವಣೆ ಮತಗಟ್ಟೆ ಸಿಬ್ಬಂದಿ ಮತ್ತು ಮೈಕ್ರೋ ಅಬ್ಸರ್ವರ್ಗಳನ್ನು ನೇಮಕಾತಿ ಮಾಡಿದ್ದು, ಅವರನ್ನು ತುಮಕೂರು ಜಿಲ್ಲಾ ವ್ಯಾಪ್ತಿಯ 11 ವಿಧಾನಸಭಾ ಸೆಗ್ಮೆಂಟ್ಗಳಿಗೆ ನೇಮಿಸಲಾಗಿದೆ.
ಮತಗಟ್ಟೆ ಅಧಿಕಾರಿ ಸಿಬ್ಬಂದಿ ಮೈಕ್ರೋ ಅಬ್ಸರ್ವರ್ಸ್ ಅವರು ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕು ಕೇಂದ್ರಸ್ಥಾನದ ಸ್ಥಳಗಳಿಂದ ಅವರನ್ನು ನೇಮಕ ಮಾಡಿದ ವಿಧಾನಸಭಾ ಸೆಗ್ಮೆಂಟ್ಗಳಿಗೆ ವಾಹನ ವ್ಯವಸ್ಥೆ ಮಾಡಿದ್ದು, ವಾಹನ ವ್ಯವಸ್ಥೆಯ ಉಪಯೋಗ ಪಡೆದು ನೇಮಕವಾದ ವಿಧಾನಸಭಾ ಸೆಗ್ಮೆಂಟ್ಗಳಿಗೆ ಚುನಾವಣಾ ಕರ್ತವ್ಯಕ್ಕೆ ಸಕಾಲಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ತುಮಕೂರು ಗ್ರಾಮಾಂತರ ಮತ್ತು ನಗರದಿಂದ ತುಮಕೂರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ಬಸ್ ಹೊರಡಲಿದೆ.
ಗುಬ್ಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ, ಚಿ.ನಾ.ಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ತಿಪಟೂರು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ತುರುವೇಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ಕುಣಿಗಲ್ ಮಹಾತ್ಮಗಾಂಧಿ ಸರ್ಕಾರಿ ಪದವಿಪೂರ್ವ ಕಾಲೇಜು, ಕೊರಟಗೆರೆ ಸರ್ಕಾರಿ ಕಿರಿಯ ಕಾಲೇಜು, ಶಿರಾ ಸರ್ಕಾರಿ ಪದವಿಪೂರ್ವ ಕಾಲೇಜು, ಪಾವಗಡ ಸರ್ಕಾರಿ ಪದವಿಪೂರ್ವ ಕಾಲೇಜು, ಮಧುಗಿರಿ ಸರ್ಕಾರಿ ಪದವಿಪೂರ್ವ ಕಾಲೇಜ್ನಿಂದ ಬಸ್ ಹೊರಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

