ತುಮಕೂರು

ಡಾ.ವೆಂಕಟರಾಮಯ್ಯ ನಡೆಯಲ್ಲಿ ಕುತಂತ್ರ

Published On :

ಪಾವಗಡ: ಅಧ್ಯಕ್ಷರ ಅನುಮತಿ ಇಲ್ಲದೇ ಎಚ್‌ಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ಡಾ.ವೆಂಕಟರಾಮಯ್ಯ ಅವರ  ಆಚರಣೆಯಲ್ಲಿ ಕುತಂತ್ರ ಕಾಣಬಹುದಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ತಿಮ್ಮಾರೆಡ್ಡಿ ಆರೋಪಿಸಿದರು. ಅವರು  ಪತ್ರಿಕಾಗೋಷ್ಠಿಯಲ್ಲಿ ಎಚ್‌ಡಿಕೆ ಕಾರ್ಯಕ್ರಮಕ್ಕೆ ಡಾ.ವೆಂಕಟರಾಮಯ್ಯ ಆಗಮಿಸಿರುವುದನ್ನು ತೀವ್ರವಾಗಿ ವಿರೋಧಿಸಿದರು. ಪಕ್ಷ ವಿರೋಧಿ ಚಟವಟಿಕೆಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಲ್ಲಿನ ಕಾರ್ಯಕ್ರಮದ ವೇದಿಕೆಗೆ ಆಗಮಿಸುತ್ತಿದ್ದಂತೆ ದಿಢೀರೆಂದು ವೇದಿಕೆ ಆಗಮಿಸಿದ ಡಾ.ವೆಂಕಟರಾಮಯ್ಯ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೂವಿನ ಹಾರ ಹಾಕಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದು ಕುತಂತ್ರದಿಂದ ಕೂಡಿದೆ. ಅಲ್ಲದೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷರ ಅನುಮತಿ ಇಲ್ಲದೆ ಜೆಡಿಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ತಪ್ಪು ಎಂದು  ಎಂದರು. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಎ.ಶಂಕರರೆಡ್ಡಿ, ತಿಪ್ಪಗಾನಹಳ್ಳಿ ಈಶ್ವರಪ್ಪ, ಎಸ್.ಟಿ.ನಾಗರಾಜಪ್ಪ, ಶಿವಪ್ಪನಾಯಕ ವಸಂತ್ ಕುಮಾರ್ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.