ಬಿಜೆಪಿ ಸಹವಾಸ ಸಾಕಪ್ಪ ಸಾಕು: ಮೊಯ್ಲಿ ವ್ಯಂಗ್ಯ
ಕ.ಪ್ರ. ವಾರ್ತೆ ತುಮಕೂರು ಮೇ 3
ಬಿಜೆಪಿ ಎಂಬ ದುಃಸ್ವಪ್ನ ರಾಜ್ಯದಲ್ಲಿ ಮರುಕಳಿಸುವುದು ಬೇಡ. ಬಿಜೆಪಿ ಸರ್ಕಾರ ಮತ್ತೆ ರಚನೆಯಾಗುವುದು ಬೇಡ ಅದರ ಸಹವಾಸ ಸಾಕಪ್ಪ ಸಾಕು ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಎಸಗಿರುವ ಭ್ರಷ್ಟಾಚಾರ ಊಹೆಗೂ ನಿಲುಕದ್ದು. ಸಾಮಾಜಿಕ ಕ್ಷೇತ್ರಗಳಲ್ಲಿ ಆಗಿರುವ ಅನ್ಯಾಯ ವಿಪರೀತ ಎಂದು ಮೊಯ್ಲಿ ಹೇಳಿದರು.
ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ದಾಭೋಲ್ನಿಂದ ಅನಿಲ ಪೈಪ್ ಲೈನ್, ತುಮಕೂರನ್ನು ಕೈಗಾರಿಕಾ ಹಬ್ ಆಗಿ ಪರಿವರ್ತಿಸುವುದು. ಮುಂಬೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಮಾಡುವುದು ಸೇರಿದಂತೆ ಶೈಕ್ಷಣಿಕವಾಗಿ ಕ್ರಾಂತಿಕಾರಿ ಬದಲಾವಣೆ ಮಾಡುವ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದೆ. ವಾಟರ್ಗ್ರಿಡ್ ಯೋಜನೆ ಜಾರಿಗೆ ಆದ್ಯತೆ. ನರ್ಮ್ ಯೋಜನೆಗೆ ತುಮಕೂರು ನಗರ ಸೇರ್ಪಡೆ ಸೇರಿದಂತೆ ಇತರೆ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ ಎಂದು ಮೊಯ್ಲಿ ತಿಳಿಸಿದರು.
ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ಕೆಲ ಭಾಗಗಳಿಗೆ ತಮ್ಮ ಅವಧಿಯಲ್ಲಿ ಹೇಮಾವತಿ ಹರಿಸಲಾಯಿತು. ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಮಾಜಿ ಪ್ರಧಾನಿ ದೇವೇಗೌಡ ಅಡ್ಡಗಾಲಾಕಿದ್ದರು. ಆದರೆ, ತಾವು ಇದಕ್ಕೆ ಕಿವಿಗೊಡದೆ ನೀರು ಹರಿಸಲು ಸಹಕರಿಸಿದೆ. ಅಂದು ದಿ. ವೈ.ಕೆ. ರಾಮಯ್ಯ ಇದ್ದರು. ಇದರಿಂದ ಸುಮಾರು 18 ಲಕ್ಷ ಹೆಕ್ಟೇರ್ ನೀರಾವರಿಗೆ ಅವಕಾಶವಾಯಿತು ಎಂದು ಮೊಯ್ಲಿ ತಮ್ಮ ಹಳೇ ನೆನಪುಗಳನ್ನು ಬಿಚ್ಚಿಟ್ಟರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ರಫೀಕ್ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್, ಕೆಪಿಸಿಸಿ ವೀಕ್ಷಕ ಹನೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

