ದುರ್ಗಮ್ಮ ರಥೋತ್ಸವಕ್ಕೆ ಜನ ಜಾತ್ರೆ...
ಹುಳಿಯಾರು: ಇಲ್ಲಿನ ಗ್ರಾಮದೇವತೆ ದುರ್ಗಾಪರಮೇಶ್ವರಿ ರಥೋತ್ಸವವು ಸಹಸ್ರಾರು ಭಕ್ತರ ಉಪಸ್ಥಿತಿಯಲ್ಲಿ ವಿವಿಧ ಗ್ರಾಮದೇವತೆಗಳ ಸಮ್ಮುಖದಲ್ಲಿ ವೇದ ಮಂತ್ರ ಘೋಷಗಳ ನಾದದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ರಥೋತ್ಸವ ಅಂಗವಾಗಿ ಬೆಳಿಗ್ಗೆಯಿಂದಲೇ ಕಳಸ ಪ್ರತಿಷ್ಠಾಪನೆ ಸೇರಿದಂತೆ ಇನ್ನಿತರ ಧಾರ್ಮಿಕ ವಿಧಿ-ವಿಧಾನಗಳು ಹಾಗೂ ಪೂಜಾ ಕೈಂಕರ್ಯ ನೆರವೇರಿದವು.
ಮಂಗಳವಾದ್ಯದೊಂದಿಗೆ ದುರ್ಗಾ ಪರಮೇಶ್ವರಿ ದೇವಿಯ ಮೂಲ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಗ್ರಾಮದೇವತೆಗಳಾದ ಹುಳಿಯಾರಿನ ಹುಳಿಯಾರಮ್ಮ ಹಾಗೂ ಕೆಂಚಮ್ಮ, ಗೌಡಗೆರೆಯ ದುರ್ಗಮ್ಮ, ತಿರುಮಲಾಪುರದ ಕೊಲ್ಲಾಪುರದಮ್ಮ, ದಮ್ಮಡಿಹಟ್ಟಿಯ ಈರಬೊಮ್ಮಕ್ಕದೇವಿ, ಕೆ.ಸಿ.ಪಾಳ್ಯದ ಅಂತರಘಟ್ಟಮ್ಮ ದೇವಿ, ಹೊಸಹಳ್ಳಿಯ ಅಂತರಘಟ್ಟಮ್ಮ ದೇವರಗಳಿಂದ ದೇವಾಲಯ ಪ್ರದಕ್ಷಿಣೆ ಮಾಡಿಸಿ, ಭಕ್ತಾಧಿಗಳ ಉದ್ಘೋಷ ದೊಂದಿಗೆ ರಥ ಎಳೆಯಲಾಯಿತು.
ರಥೋತ್ಸವಕ್ಕೂ ಮುನ್ನ ಸೋಮನನ್ನು ಸಿಂಗರಿಕೊಂಡು ಸಕಲ ವಾದ್ಯಗಳೊಂದಿಗೆ ರೇವಣಪ್ಪ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ, ಪಾನಕದ ಗಾಡಿ ಜೊತೆಯಲ್ಲಿ ಕರೆತರಲಾಯಿತು.
ರಥೋತ್ಸವ ಅಂಗವಾಗಿ ಪಾನಕ, ಕೋಸಂಬರಿ ಹಾಗೂ ಮಜ್ಜಿಗೆ ವಿತರಿಸಲಾಯಿತು. ಬೆಂಗಳೂರು ಕಾಡಿಗಾನಹಳ್ಳಿಯ ಸುಬ್ರಹ್ಮಣ್ಯ ಅವರಿಂದ ನೆರೆದಿದ್ದ ಭಕ್ತಾಧಿಗಳಿಗೆ ಹಾಗೂ ವಿಪ್ರಸಂಘದಿಂದ ಬ್ರಾಹ್ಮಣರಿಗೆ ಅನ್ನ ಸಂತರ್ಪಣೆ ನಡೆಯಿತು. ಹುಳಿಯಾರು ಸುತ್ತಮುತ್ತಲಿನ ಹಾಗೂ ದೂರದೂರುಗಳ ಭಕ್ತಾಧಿಗಳು ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

