ಪಕ್ಷೇತರ ಅಭ್ಯರ್ಥಿ ಮತಯಾಚನೆ
ಕುಣಿಗಲ್: ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಕೇವಲ ಭರವಸೆ ನೀಡುತ್ತವೆ. ಜನತೆಯಿಂದ ಆಯ್ಕೆಯಾದ ಕೊಟ್ಟ ಭರವಸೆ ಮರೆತುಹೋಗಿ, ಮತ್ತದೇ ಸಮಸ್ಯೆ ಎದುರಿಸಬೇಕಾಗುವುದರಿಂದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ತಿರಸ್ಕರಿಸಿ, ಪಕ್ಷೇತರ ಅಭ್ಯರ್ಥಿಯನ್ನೇ ಆಯ್ಕೆಮಾಡುವಂತೆ ಪಕ್ಷೇತರ ಅಭ್ಯರ್ಥಿ ರವಿಕಿರಣ್ ಮನವಿ ಮಾಡಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿಯಲ್ಲಿ ತೆರಳಿ ರೋಡ್ಶೋ ಮೂಲಕ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಆಡಳಿತ ನಡೆಸಿ ಹೋದರೂ ಪಟ್ಟಣ ಸೇರಿದಂತೆ ತಾಲೂಕು ಸಮಗ್ರ ಅಭಿವೃದ್ಧಿ ಹೊಂದಿಲ್ಲ, ಪಟ್ಟಣದ ರಸ್ತೆಗಳು ಗುಂಡಿಗಳಿಂದ ತುಂಬಿದ್ದರೆ, ಬಸ್ನಿಲ್ದಾಣ, ಆಸ್ಪತ್ರೆಗಳು ಮೂಲ ಸೌಕರ್ಯದಿಂದ ವಂಚಿತವಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹಲವು ತರಹದ ಸಮಸ್ಯೆಗಳು ತಾಂಡವವಾಡುತ್ತಿವೆ ಎಂದು ಕಿಡಿಕಾರಿದರು.
ಜೆಡಿಎಸ್ ಯುವ ಘಟಕಕ್ಕೆ ನೇಮಕ
ಪಾವಗಡ: ತಾ.ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ರಂಗಸಮುದ್ರ ಮಾಜಿ ಗ್ರಾಪಂ ಅಧ್ಯಕ್ಷ ಮಾರಪ್ಪ ಅವರ ಪುತ್ರ ಎಂ. ತಿಪ್ಪೇಸ್ವಾಮಿ ನೇಮಕಗೊಂಡಿದ್ದಾರೆ. ಕಳೆದ 10 ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಮೇರೆಗೆ ತಿಪ್ಪೇಸ್ವಾಮಿ ಅವರನ್ನು ಪಕ್ಷದ ಯುವ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದಾಗಿ ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

