ಮತದಾನಕ್ಕೆ ತಾಲೂಕು ಆಡಳಿತ ಸಜ್ಜು
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಂತಿಯುತ ಮತದಾನಕ್ಕೆ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರದೀಪ್ ಹಾಗೂ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮಂಜೇಗೌಡ ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 175949 ಮತದಾರರಿದ್ದಾರೆ. ಇವರಲ್ಲಿ 87941 ಪುರುಷ ಮತದಾರರು, 88003 ಮಹಿಳಾ ಮತದಾರರು ಹಾಗೂ 5 ಮಂದಿ ಮಂಗಳ ಮುಖಿಯರು ಮತದಾರರಿದ್ದಾರೆ. ಒಟ್ಟು 226 ಮತಕಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 45 ಸೂಕ್ಷ್ಮ, 43 ಅತಿ ಸೂಕ್ಷ್ಮ ಹಾಗೂ 138 ಸಾಮಾನ್ಯ ಮತಕಟ್ಟೆಗಳೆಂದು ಪರಿಗಣಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಕಟ್ಟೆಗಳಿಗೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. 5 ಸಂಚಾರಿ ವಿಚಕ್ಷಣಾ ದಳ, 19 ಸೆಕ್ಟ್ರರಲ್ ಅಧಿಕಾರಿಗಳು, 1 ಎಂ.ಸಿ ಸಿ ನೋಡಲ್ ಅಧಿಕಾರಿ, 1100 ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬೆಳಗ್ಗೆ 7 ರಿಂದ ಸಾಯಂಕಾಲ 6 ರವರೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
1 ಡಿವೈಎಸ್ಪಿ, ಇಬ್ಬರು ವೃತ್ತ ನಿರೀಕ್ಷಕರು, 4 ಸಬ್ ಇನ್ಸ್ ಪೆಕ್ಟರ್, 11 ಎಎಸ್‌ಐ, 125 ಕಾನ್ಸ್ ಟೇಬಲ್, 75 ಮುಖ್ಯ ಪೇದೆ, 140 ಸಶಸ್ತ್ರ ಪಡೆ ತುಕಡಿ, 12 ಐಆರ್‌ಬಿ ಸೇರಿದಂತೆ ಒಟ್ಟು 370 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಬಕಾರಿ ಇಲಾಖಾಧಿಕಾರಿ ನಿಜಯಕುಮಾರ್ ಅವರ ನೇತೃತ್ವದಲ್ಲಿ ಮದ್ಯ ಮಾರಾಟ ಅಥವಾ ವಿತರಣೆ ಕುರಿತು ತೀವ್ರ ನಿಗಾ ಇಡಲಾಗಿದೆ ಎಂದು ತಿಳಿಸಿದರು. 5 ರಂದು ನಡೆಯುವ ಮತದಾನದಲ್ಲಿ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಸಂವಿಧಾನಬದ್ಧ ಹಕ್ಕನ್ನು ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಪ್ರದೀಪ್ ಹಾಗೂ ಮಂಜೇಗೌಡ ವಿನಂತಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

