210 ಮತಗಟ್ಟೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ
ಕ.ಪ್ರ. ವಾರ್ತೆ ಗುಬ್ಬಿ ಮೇ 4
ಭಾನುವಾರ ನಡೆಯಲಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಮತದಾನ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ ಕ್ಷೇತ್ರದ 210 ಮತಗಟ್ಟೆಗಳಿಗೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಚುನಾವಣಾ ಸಿಬ್ಬಂದಿಯನ್ನು ಮತಗಟ್ಟೆಗೆ ಕಳುಹಿಸುವ ಕಾರ್ಯ ಮೇ 4 ರಂದು ನಡೆಯಿತು.
ಗುಬ್ಬಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಿಗ್ಗೆ 5 ಗಂಟೆಗೆ ವಿವಿಧ ತಾಲೂಕುಗಳಿಗೆ ಚುನಾವಣಾ ಕಾರ್ಯಕ್ಕೆ ತೆರಳುವ ಸಿಬ್ಬಂದಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ನಂತರ 8 ಗಂಟೆಗೆ ವಿವಿಧ ತಾಲೂಕುಗಳಿಂದ ನೇಮಕವಾದ ಸಿಬ್ಬಂದಿಗಳು ಆಗಮಿಸಿ 14 ಕೌಂಟರ್ಗಳಲ್ಲಿ ನಿಯೋಜನೆಗೊಂಡ ಬೂತ್ಗಳ ಚುನಾವಣಾ ಸಿಬ್ಬಂದಿ ಮತಯಂತ್ರ, ಸೀಲು ಇನ್ನಿತರ ಸಾಮಗ್ರಿಗಳನ್ನು ಪಿಆರ್ಒ ತಮ್ಮ ಸದಸ್ಯರೊಂದಿಗೆ ಪಡೆದು ಪರಿಶೀಲಿಸಿದರು. ಮತಯಂತ್ರ ದೋಷವಿರುವವರು ಮತಯಂತ್ರ ರಿಪೇರಿ ಮಾಡಿಸಿಕೊಂಡರು. ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದ ಮತಯಂತ್ರಗಳನ್ನು ಬದಲಾಯಿಸಿಕೊಂಡರು.
210 ಎಪಿಆರ್ಒ, ಪ್ರತಿ ಮತಗಟ್ಟೆಗೆ ಇಬ್ಬರು ಸಹಾಯಕರು ಮತ್ತು ಒಬ್ಬರು ಪೊಲೀಸರನ್ನು ನಿಯೋಜಿಸಲಾಯಿತು. ಒಟ್ಟು 300 ಪೊಲೀಸರು 200 ಹೋಂಗಾರ್ಡ್ ನಿಯೋಜನೆ ಮತ್ತು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಅರೆ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

