ತುಮಕೂರು

ಏಳೂ ಸ್ಥಾನಗಳು ಜೆಡಿಎಸ್‌ಗೆ: ರೇವಣ್ಣ ವಿಶ್ವಾಸ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಮೇ 5
ಕಾಂಗ್ರೆಸ್ ಹಾಗೂ ಬಿಜೆಪಿಯ ಜನ ವಿರೋಧಿ ಕೃತ್ಯಗಳಿಂದ ಬೇಸತ್ತಿರುವ ಜಿಲ್ಲೆಯ ಮತದಾರರರು ಎಲ್ಲಾ 7 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂಬ ಅದಮ್ಯ ವಿಶ್ವಾಸವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ವ್ಯಕ್ತಪಡಿಸಿದ್ದಾರೆ.
  ಭಾನುವಾರ ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮೂರು ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಅಂಗಮಾರಿ ರೋಗದಿಂದ ನಾಶವಾದ ಆಲೂಗಡ್ಡೆ ಬೆಳೆಗೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವಾಗಲಿ, ರಾಜ್ಯ ಬಿಜೆಪಿ ಸರ್ಕಾರವಾಗಲಿ ನಯಾಪೈಸೆ ಪರಿಹಾರ ನೀಡಲಿಲ್ಲ.  ಬರಗಾಲದಲ್ಲಿ ಸೂಕ್ತ ಪರಿಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ನೀಡಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. ಅಲ್ಲದೆ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಿಲ್ಲ. ಇದರ ಪರಿಣಾಮ ಪಂಪ್‌ಸೆಟ್ ಅವಲಂಬಿಸಿ ಬೆಳೆಯುವ ಬೆಳೆಗಳನ್ನು ಬೆಳೆಯಲು ರೈತರಿಗೆ ಸಾಧ್ಯವಾಗಲಿಲ್ಲ.  ಜಿಲ್ಲಾದ್ಯಂತ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇದ್ದಾಗ ವೈದ್ಯಕೀಯ, ಎಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳಲ್ಲದೆ ಕೃಷಿ ಮತ್ತು ಪಶು ವೈದ್ಯಕೀಯ ಕಾಲೇಜುಗಳನ್ನು ಮತ್ತು 18 ಪ್ರಥಮ ದರ್ಜೆ ಕಾಲೇಜು, 50 ಕ್ಕೂ ಹೆಚ್ಚು ಪ್ರೌಢ ಶಾಲೆತೆರೆಯಲಾಯಿತು. ಆದರೆ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಕಡಿವಾಣ ಹಾಕಿತು ಎಂದು ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.