ಎಲ್ಲರ ಚಿತ್ತ ಫಲಿತಾಂಶದತ್ತ
ಕ.ಪ್ರ. ವಾರ್ತೆ ಮಧುಗಿರಿ ಮೇ 6
ತೀವ್ರ ಕುತೂಹಲ ಕೆರಳಿಸಿರುವ ಮಧುಗಿರಿ ವಿಧಾನಸಭಾ ಕ್ಷೇತ್ರದ ಚುನಾವಣೆ ಬಹುತೇಕ ಶಾಂತ ರೀತಿಯಲ್ಲಿನಡೆದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.
ಕಳೆದ ಉಪ ಚುನಾಣೆಯಲ್ಲಿ ಮಾಜಿ ಸಿಎಂ ಪತ್ನಿ ಅನಿತಾಕುಮಾರಸ್ವಾಮಿ ಸ್ಪರ್ಧೆಯಿಂದ ಮಧುಗಿರಿ ಸ್ಟಾರ್ ವ್ಯಾಲ್ಯೂ ಹೆಚ್ಚಿತ್ತು. ಆದರೆ ಈ ಸಲ ಐಎಎಸ್ ನಿವೃತ್ತ ಅಧಿಕಾರಿ ಎಂ.ವಿ.ವೀರಭದ್ರಯ್ಯ ಜೆಡಿಎಸ್ನಿಂದ ಸ್ಪರ್ಧಿಸಿದ್ದು ವಿಶೇಷವಾಗಿತ್ತು. ಆದರೆ ಕಳೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಸೋತಿದ್ದರೂ ಕೂಡ ದೃತಿಗೆಡದೆ ಗೆಲವು ಕಂಡುಕೊಳ್ಳಲು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಜನತೆಗೆ ಸ್ಪಂದಿಸುತ್ತಾ ಮತದಾರರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ, ಜೆಡಿಎಸ್ ಅಭ್ಯರ್ಥಿ ಎಂ.ವಿ.ವೀರಭದ್ರಯ ಹಾಗೂ ಬಿಎಸ್ಪಿ ಅಭ್ಯರ್ಥಿ ಕೋರಮಂಗಲ ಮುನಿಯಪ್ಪ ಸ್ಪರ್ಧೆಯಿಂದ ಮಧುಗಿರಿ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.
ಒಟ್ಟಿನಲ್ಲಿ ಕ್ಷೇತ್ರದಲ್ಲಿ ಚುನಾವಣೆ ಮುಗಿದಿದ್ದು ಶೇ.80.18 ರಷ್ಟು ಮತದಾನವಾಗಿರುವುದು ವಿಶೇಷವಾಗಿದೆ.
ತಾಲೂಕಿನ ಐ.ಡಿ.ಹಳ್ಳಿ ಹೋಬಳಿ ವಿಠಲಾಪುರ ಗ್ರಾಮದಲ್ಲಿ ಅತಿ ಕಡಿಮೆ ಮತದಾನವಾದರೆ ದೊಡ್ಡೇರಿ ಹೋಬಳಿ ಭಸ್ಮಂಗಿ ಕಾವಲ್ನಲ್ಲಿ ಅತಿ ಹೆಚ್ಚು ಮತದಾನವಾಗಿದೆ. ವಿಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದುನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

