10ನೇ ಸ್ಥಾನಕ್ಕೆ ಕುಸಿದ ಜಿಲ್ಲೆ
ಕ.ಪ್ರ. ವಾರ್ತೆ, ತುಮಕೂರು, ಮೇ 6
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ತುಮಕೂರು ಈ ಬಾರಿ 10 ನೇ ಸ್ಥಾನಕ್ಕೆ ಕುಸಿದಿದ್ದು ಶೇ. 83.98 ಫಲಿತಾಂಶ ಲಭಿಸಿದೆ.
ಕಳೆದ ಬಾರಿ ಶೇ. 85.84 ಫಲಿತಾಂಶ ಇತ್ತು. ಈ ಬಾರಿ 24382 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಇವರಲ್ಲಿ 12993 ಮಂದಿ ವಿದ್ಯಾರ್ಥಿಗಳು, 11389 ವಿದ್ಯಾರ್ಥಿನಿಯರು ಪರೀಕ್ಷೆ ತೆಗೆದುಕೊಂಡಿದ್ದರು. ಇವರಲ್ಲಿ 20475 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 10628 ಮಂದಿ ವಿದ್ಯಾರ್ಥಿಗಳು, 9847 ಮಂದಿ ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ತುಮಕೂರು ತಾಲೂಕಿನ ಹೆಬ್ಬೂರು ಗ್ರಾಮದ ವಿಪ್ರ ಆಂಗ್ಲ ಪ್ರೌಢಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಕುಳಿತಿದ್ದ ಎಲ್ಲಾ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಹಾಗೆಯೇ ತುಮಕೂರಿನ ಬಸವೇಶ್ವರ ರಸ್ತೆಯಲ್ಲಿ ರೇಣುಕಾ ವಿದ್ಯಾಪೀಠ ಶಾಲೆಯಲ್ಲಿ 5 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 15 ಮಂದಿ ಪ್ರಥಮ ದರ್ಜೆ, 5 ಮಂದಿ ದ್ವಿತೀಯ ದರ್ಜೆ ಹಾಗೂ ಇಬ್ಬರು ಉತ್ತೀರ್ಣರಾಗಿದ್ದಾರೆ.
ಕಳೆದ ಬಾರಿಗೆ ಹೋಲಿಸಿದರೆ ತುಮಕೂರು ಸಾಧನೆ ಕಳಪೆಯಾಗಿದೆ. ಕಳೆದ ಸಲಕ್ಕೆ ಹೋಲಿಸಿದರೆ ಶೇಕಡಾವಾರು ಫಲಿತಾಂಶ ಹಾಗೂ ಸ್ಥಾನ ಏರಿಕೆಯಲ್ಲೂ ಕಳಪೆ ಸಾಧನೆ ಮಾಡಿದೆ. ಮುಂದಿನ ದಿನಗಳಲ್ಲಿ ಫಲಿತಾಂಶ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ.
ಇಂಟರ್ನೆಟ್ ಕೇಂದ್ರಕ್ಕೆ: ಬೆಳಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆ ಹೊರಬೀಳುತ್ತಿದ್ದಂತೆಯೇ ತಮ್ಮ ಫಲಿತಾಂಶ ಏನಾಗಿದೆ ಎಂಬ ಕುತೂಹಲದಲ್ಲಿ ವಿದ್ಯಾರ್ಥಿಗಳು ಇಂಟರ್ನೆಟ್ ಕೇಂದ್ರಕ್ಕೆ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ ಪರೀಕ್ಷೆ ಫಲಿತಾಂಶ ಹೊರ ಬಿದ್ದ ಕೂಡಲೇ ಆಯಾ ಶಾಲೆಗಳಿಗೂ ವಿದ್ಯಾರ್ಥಿಗಳೂ ತಮ್ಮ ಫಲಿತಾಂಶ ತಿಳಿದುಕೊಳ್ಳಲು ಹೋಗುತ್ತಿದ್ದರು. ಇನ್ನು ಕೆಲವರು ಮನೆಯಲ್ಲೇ ತಮ್ಮ ಫಲಿತಾಂಶ ನೋಡಿ ಸಂಭ್ರಮಿಸಿದರು. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದವರು, ಉತ್ತೀರ್ಣರಾದವರು ಪರಸ್ಪರ ಶುಭಾಶಯ ಕೋರುತ್ತಿದ್ದ ದೃಶ್ಯ ಕೂಡ ಸಾಮಾನ್ಯವಾಗಿತ್ತು. ಒಟ್ಟಾರೆಯಾಗಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಸಾಧನೆ ಹೇಳಿಕೊಳ್ಳುವಷ್ಟು ಇಲ್ಲದಿದ್ದರೂ ವಿದ್ಯಾರ್ಥಿಗಳು ಮಾತ್ರ ಪರೀಕ್ಷಾ ಫಲಿತಾಂಶ ತಿಳಿದು ಸಂಭ್ರಮಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

