ಪಕ್ಷದ ಮುಖಂಡರಿಂದಲೇ ಸೋತೆ: ಗೀತಾ ರಾಜಣ್ಣ
ಕ.ಪ್ರ.ವಾರ್ತೆ ತುರುವೇಕೆರೆ ಮೇ 9
ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಕಂಡರೂ ತಮ್ಮ ಪಕ್ಷ ರಾಜ್ಯದ ಚುಕ್ಕಾಣಿ ಹಿಡಿದಿರುವುದರಿಂದ ತಮಗೆ ಹೆಚ್ಚು ಸಂತಸ ತಂದಿದೆ ಎಂದು ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿಯಾಗಿರುವ ಗೀತಾ ರಾಜಣ್ಣ ಹೇಳಿದರು.
ಫಲಿತಾಂಶ ಪ್ರಕಟಗೊಂಡ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಮತದಾರರು ತಮ್ಮನ್ನು ಗುರುತಿಸಿ ಮತ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಮತ ನೀಡುವ ಮತದಾರರನ್ನು ತಮ್ಮ ಪಕ್ಷದ ಮುಖಂಡರೇ ದಾರಿ ತಪ್ಪಿಸಿದರು ಎಂದು ಗೀತಾ ರಾಜಣ್ಣ ಆರೋಪಿಸಿದರು.
ತಾವು ಮಹಿಳೆ ಎಂಬ ಕಾರಣಕ್ಕೆ ಟಿಕೆಟ್ ಪಡೆಯಲು ಮುಂದಾಗಿದ್ದ ಹಲವಾರು ಮುಖಂಡರು ತಮಗೆ ಕೈ ಕೊಟ್ಟರು. ಮತದಾರರಿಗೇ ಇವರೇ ತಪ್ಪು ಸಂದೇಶ ನೀಡಿದರು. ಕಾರ್ಯಕರ್ತರನ್ನು ದಿಕ್ಕು ತಪ್ಪಿಸಿದರು. ಹಾಗಾಗಿ ತಮಗೆ ಸೋಲಾಯಿತು ಎಂದು ಹೇಳುತ್ತಾ ಗದ್ಗದಿತರಾದರು. ಸದ್ಯ ಇರುವ ಸಮಿತಿಯನ್ನು ವಿಸರ್ಜನೆ ಮಾಡಿಸಿ ನೂತನ ಸಮಿತಿ ರಚಿಸಿ ಪಕ್ಷವನ್ನು ಕಟ್ಟುವುದಾಗಿ ಗೀತಾ ರಾಜಣ್ಣ ಹೇಳಿದರು.
ಧೃತಿಗೆಡುವ ಮಹಿಳೆ ನಾನಲ್ಲ: ಸೋಲು ಗೆಲವು ಪ್ರತಿಯೊಬ್ಬರಿಗೂ ಇದ್ದದ್ದೇ. ಈ ಸೋಲನ್ನು ತಾವು ಸವಾಲಾಗಿ ಸ್ವೀಕರಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟನೆ ಮಾಡುವುದಾಗಿ ಹೇಳಿದರು.
ತಾಲ್ಲೂಕು ಅಧ್ಯಕ್ಷರು, ಪಟ್ಟಣ ಪಂಚಾಯ್ತಿಯ ಕೆಲವು ಸದಸ್ಯರು ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರ ಪರಿಣಾಮವೇ ಪಕ್ಷ ಈ ಕೆಳಮಟ್ಟಕ್ಕೆ ಬರಲು ಸಾಧ್ಯವಾಗಿದೆ. ಆದ್ದರಿಂದ ಇವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ಅಧ್ಯಕ್ಷರಿಗೆ ದೂರು ನೀಡುವುದಾಗಿ ಗೀತಾ ರಾಜಣ್ಣ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದಿರುವುದರಿಂದ ಸಂತಸಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

