ಜೆಡಿಎಸ್ ಎಸ್ಸಿ ಘಟಕದ ಅಭಿನಂದನೆ
ಪಾವಗಡ: ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರಿಗೆ ಅತ್ಯಧಿಕ ಮತ ನೀಡಿ ಗೆಲವಿಗೆ ಸಹಕರಿಸಿದ ತಾಲೂಕಿನ ಎಲ್ಲ ದಲಿತ ಕಾಲೋನಿಯ ಮತದಾರರಿಗೆ ಜೆಡಿಎಸ್ ಎಸ್.ಸಿ.ಘಟಕದ ಅಧ್ಯಕ್ಷ ಬಿ.ಹೊಸಹಳ್ಳಿ ಮಲ್ಲಿಕಾರ್ಜುನ ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ಗುರುವಾರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಭಾರಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಸುಮಾರು 45 ಸಾವಿರ ದಲಿತ ಮತದಾರರು ಒಂದಾಗಿ ಜನಾಂಗದ ಹಿರಿಯ ಮುಖಂಡ, ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರನ್ನು ಬೆಂಬಲಿಸಿ ಜೆಡಿಎಸ್ಗೆ ಮತ ನೀಡಿರುವುದು ಸಂತಸದ ಸಂಗತಿ ಎಂದರು. ಅಲ್ಲದೆ ರೆಡ್ಡಿ, ನಾಯಕ, ಒಕ್ಕಲಿಗ, ಬ್ರಾಹ್ಮಣ, ಲಿಂಗಾಯತ ಸೇರಿದಂತೆ ಎಲ್ಲರೂ ಜೆಡಿಎಸ್ ಬೆಂಬಲಿಸಿ ಗೆಲವಿಗೆ ಸಹಕರಿಸಿದವರಿಗೆ ಅಭಿನಂದಿಸುವುದಾಗಿ ಅವರು ತಿಳಿಸಿದರು.
ಬೇಸಿಗೆ ಶಿಬಿರ ಆಯೋಜನೆ
ಕೊರಟಗೆರೆ: ಇಲ್ಲಿನ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 15 ರಿಂದ 24 ರವರೆಗೆ 5 ವರ್ಷದಿಂದ 16 ವರ್ಷದೊಳಗಿನ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಚಿತ್ರ ಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಗೀತೆ, ಬೊಂಬೆ ತಯಾರಿಕೆ, ರಂಗೋಲಿ, ಎಂಬ್ರಾಯಿಡರಿ, ಯೋಗ, ಮೆಹಂದಿ, ಹೂ-ತಯಾರಿಕೆ ಬಗ್ಗೆ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

