ಶಾಶ್ವತ ನೀರಾವರಿ ಸೌಲಭ್ಯ: ಶಾಸಕ ರುದ್ರೇಶಗೌಡ
ಜಾವಗಲ್: ಹೋಬಳಿಗೆ ಶಾಶ್ವತ ನೀರಾವರಿ ಸೌಲಭ್ಯ ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವುದಾಗಿ ಶಾಸಕ ವೈ.ಎನ್. ರುದ್ರೇಶಗೌಡ ತಿಳಿಸಿದರು. ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು 2ನೇ ಬಾರಿಗೆ ಶಾಸಕರಾಗಿ ಆಯ್ಕೆ ಮಾಡಿರುವುದಕ್ಕೆ ಹೋಬಳಿ ಮತದಾರರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಿದರು. ಹೋಬಳಿ ರಸ್ತೆಗಳ ಅಭಿವೃದ್ಧಿ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವುದಾಗಿ ತಿಳಿಸಿದರು.
ನಂತರ ತೆರೆದ ಜೀಪಿನಲ್ಲಿ ಪಟ್ಟಣದಲ್ಲಿ ಬೇಲೂರು ಕ್ಷೇತ್ರದಿಂದ 2ನೇ ಬಾರಿಗೆ ಆಯ್ಕೆಯಾಗಿರುವ ಶಾಸಕ
ರುದ್ರೇಶಗೌಡರಿಗೆ ದರ್ಗಾ ಸಮೀಪ ತೆರೆದ ಜೀಪಿನಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ರುದ್ರೇಶಗೌಡರಿಗೆ ಹೋಬಳಿ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಬಿ.ಕೆ ಚಂದ್ರಕಲಾ, ಬೇಲೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾದವೇಗೌಡ, ಹಳೇಬೀಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ನಾಗರಾಜು, ಹಳೇಬೀಡು ಬ್ಲಾಕ್ ಎಸ್ಸಿ ಎಸ್ಟಿ ಘಟಕ ಅಧ್ಯಕ್ಷ ಜೆ.ಕೆ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ಭಾಗ್ಯರಾಜೇಗೌಡ, ವೈ.ಎನ್.ಕೃಷ್ಣೆಗೌಡ, ಯಶೊಧರಕುಮಾರ್, ತಾಪಂ ಸದಸ್ಯೆ ಲಕ್ಷ್ಮೀರವಿಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

