ತುಮಕೂರು

ಆಟೋಗಳ ಡಿಕ್ಕಿ: ಚಾಲಕ ಸಾವು

Published On :

ಸೂಲಿಬೆಲೆ: ಇಲ್ಲಿಗೆ ಸಮೀಪದ ನಂದಗುಡಿ ಪೊಲೀಸ್ ಠಾಣೆಗೆ ಒಳಪಡುವ ಬಾಣಮಾಕನಹಳ್ಳಿ ಗ್ರಾಮದ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಎದುರುಬದುರಾಗಿದ್ದ ಎರಡು ಆಟೋಗಳು  ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ತಾವರೆಕೆರೆ ಗ್ರಾಮದ ಉಮೇಶ್ (25) ಸಾವನ್ನಪ್ಪಿರುವ ಚಾಲಕ.
 ಬಾಣಮಾಕನಹಳ್ಳಿಗೆ ಕಾರ್ಯನಿಮಿತ್ತ ತಾವರೆಕೆರೆ ಗ್ರಾಮದ ಆಟೋ ಚಾಲಕ ಉಮೇಶ ಹೋಗಿದ್ದರು.ದಾರಿಯಲ್ಲಿ ಬರುವಾಗ ನಾಯಿಮೊಂದು ಅಡ್ಡ ಬಂತು ಎನ್ನಲಾಗಿದೆ. ಇದನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಆಟೋ ನಡುವೆ ಡಿಕ್ಕಿ ಸಂಭವಿಸಿತು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಉಮೇಶ್ ಅವರನ್ನು ತಕ್ಷಣ ಹೊಸಕೋಟೆ ಎಂವಿಜೆ ಆಸ್ಪತ್ರೆ ಸಾಗಿಸುತ್ತಿರುವಾಗ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.