ಮುಕ್ತ ಮಾರುಕಟ್ಟೆಯಲ್ಲಿ ಆಲೂ ಬಿತ್ತನೆ ಬೀಜ
ಕ.ಪ್ರ. ವಾರ್ತೆ ಹಾಸನ ಮೇ 10
ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಬಿತ್ತನೆ ಬೀಜ ಜಿಲ್ಲೆಗೆ ಬಂದಿದ್ದು, ಶೀಥಲೀಕರಣ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಕಡಿಮೆ ಬೆಲೆಗೆ ಬಿತ್ತನೆ ಬೀಜ ಮಾರಾಟ ಆಗಬಹುದಾದ್ದರಿಂದ ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸಿಕೊಡುವಂತೆ ವರ್ತಕರ ಮನವಿ ಮೇರೆಗೆ ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಕುರಿತಂತೆ ವರ್ತಕರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ರೈತರಿಗೆ ಸಹಕಾರಿಯಾಗುವಂತೆ ಮೇ 13ರಿಂದ ನಗರದ ಎಪಿಎಂಸಿ ಆವರಣದಲ್ಲಿ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಪ್ರಾರಂಭಿಸಲಾಗುತ್ತಿದ್ದು ಹೆಚ್ಚಿನ ದರಕ್ಕೆ ಬಿತ್ತನೆ ಬೀಜ ಮಾರಾಟವಾದಲ್ಲಿ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡುವುದು ಎಂದು ವರ್ತಕರಿಗೆ ಎಚ್ಚರಿಕೆ ನೀಡಿದರು.
ಬಿತ್ತನೆ ಆಲೂಗಡ್ಡೆ ಖರೀದಿಸಿದ ರೈತರಿಗೆ ಕಡ್ಡಾಯವಾಗಿ ರಸೀತಿ ನೀಡುವಂತೆ ತಿಳಿಸಿದರು. ಬಿತ್ತನೆ ಬೀಜದ ಗುಣಮಟ್ಟ, ತೂಕ ಮತ್ತು ಅಳತೆ, ದರದ ಬಗ್ಗೆ ನಿಗಾ ವಹಿಸಲು ಮೇಲ್ವಿಚಾರಣೆ ಸಮಿತಿಗೆ ಸೂಚಿಸಿದರು.
ಕೃಷಿ ಜಂಟಿ ನಿರ್ದೇಶಕರು, ಎಪಿಎಂಸಿ ಕಾರ್ಯದರ್ಶಿ, ತೂಕ ಮತ್ತು ಅಳತೆ ಇಲಾಖೆ ಸಹಾಯಕ ನಿಯಂತ್ರಕರು, ವಿಜ್ಞಾನಿಗಳು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಕೃಷಿ ಮಾರುಕಟ್ಟೆ ಉಪನಿರ್ದೇಶಕರು, ಪೊಲೀಸ್ ಉಪ ಆರಕ್ಷಕ ಅಧೀಕ್ಷಕರು, ಉಪವಿಭಾಗಾಧಿಕಾರಿ, ಮೇಲ್ವಿಚಾರಣಾ ಸಮಿತಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

