ಶಾಶ್ವತ ನೀರಾವರಿ ಯೋಜನೆಗೆ ಆಗ್ರಹ
ಚಿಂತಾಮಣಿ: ಬರಪೀಡಿತ ಉಭಯ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೆ ತರಲು ಕಾಂಗ್ರೇಸ್ ಸರ್ಕಾರ ಮುಂದಾಗಬೇಕೆಂದು ತಾಲೂಕು ಶಾಶ್ವತ ನೀರಾವರಿ ಸಮಿತಿಯ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ವಿವಿಧ ಪ್ರಗತಿಪರ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರು ಯಾವುದೇ ನದಿಯ ಆಧಾರವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ವಿಶೇಷ ಅನುದಾನವನ್ನು ನೀಡಬೇಕೆಂದೂ ಅವರು ಒತ್ತಾಯಿಸಿದರು.
ನಂತರ ಮಾತನಾಡಿದ ದಲಿತ ಸಂಘ ಸಮಿತಿಯ ಜಿ.ನಾರಾಯಣಸ್ವಾಮಿ, ಸರ್ಕಾರಗಳು ರೈತರ ಕಷ್ಟಗಳಿಗೆ ಸ್ಪಂದಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಸರಿಯಾದ ದೃಢನಿರ್ಧಾರವನ್ನು ತೆಗೆದುಕೊಂಡಲ್ಲಿ ನೀರಿನ ಸಮಸ್ಯೆ ಸಾಧ್ಯವಾದಷ್ಟು ಮಟ್ಟಿಗೆ ಬಗೆಹರಿಸಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

