ತುಮಕೂರು

ಇಂದು ಕೆಂಕೆರೆ ಚನ್ನಬಸವೇಶ್ವಸ್ವಾಮಿ ರಥೋತ್ಸವ

Published On :

ಹುಳಿಯಾರು: ಹೋಬಳಿ ಕೆಂಕೆರೆ ಗ್ರಾಮದ ಶ್ರೀಚನ್ನಬಸವೇಶ್ವರ ಸ್ವಾಮಿಯ ರಥೋತ್ಸವ ಇಂದು (ತಾ.13) ಸೋಮವಾರ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಮಹದೇವಮ್ಮ ಮತ್ತು ಚನ್ನಬಸವಯ್ಯ, ಈಶ್ವರಪ್ಪ ನವರಿಂದ ರಥಕ್ಕೆ ಪುಣ್ಯದ ಕಾರ್ಯ ನಂತರ ಕಳಸ ಸ್ಥಾಪನೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಗ್ರಾಮದೇವತೆ ಕಾಳಮ್ಮ,ದಮ್ಮಡಿಹಟ್ಟಿ ಈರಬೊಮ್ಮಕ್ಕದೇವಿ, ಗೌಡಗೆರೆ ದುರ್ಗಮ್ಮ ದೇವಿಯ ಸಮ್ಮುಖದಲ್ಲಿ ಸ್ವಾಮಿಯವರ ರಥೋತ್ಸವ ನಡೆಯಲಿದೆ.
ಇಂದು ಬಸವ ಜಯಂತ್ಯುತ್ಸವ
ಶಿರಾ: ಪಟ್ಟಣದ ಮೇಗಳಪೇಟೆಯ ಕಟ್ಟೆ ಬಸವೇಶ್ವರಸ್ವಾಮಿ ದತ್ತಿ ಮತ್ತು ಧಾರ್ಮಿಕ ಸಂಸ್ಥೆಯ ವತಿಯಿಂದ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇ 13 ಸೋಮವಾರದಂದು ಬಸವ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 11 ರಿಂದ ಬಸವಣ್ಣನವರ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಲಿದ್ದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನೆಡೆಯಲಿದೆ. ಮಳೆ ಮಲ್ಲಿಕಾರ್ಜುನ ಸ್ವಾಮಿಗಳು ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಲಿದ್ದು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಆಶೀರ್ವಚನ ನೀಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಜಯಚಂದ್ರ, ಲೋಕೇಶ್ವರಯ್ಯ, ರಾಜಣ್ಣ, ಮಂಜುನಾಥ್, ಚಂದ್ರಶೇಖರ ಆರಾಧ್ಯ ಮತ್ತಿತರರು ಹಾಜರಿರುವರು.
ಮಹಿಳೆಯರಿಗೆ ಹೊಲಿಗೆ ತರಬೇತಿ
ಶಿರಾ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಶಿಕ್ಷಣ ಸಂಸ್ಥೆ ಮತ್ತು ಮಹಿಳಾ ಜ್ಞಾನ ವಿಕಾಸದ ಅಡಿಯಲ್ಲಿ 3 ತಿಂಗಳ ಕಾಲ ಮಹಿಳೆಯರಿಗೆ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ತಾಲೂಕಿನ ಬರಗೂರು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.  ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಸುಕನ್ಯ ನೆರವೇರಿಸಿದರು. ಅಧ್ಯಕ್ಷತೆಯನ್ನು ಬರಗೂರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಸತೀಶ್ ವಹಿಸಿದ್ದರು. ಜನಶಿಕ್ಷಣ ಸಂಸ್ಥೆಯ ಸದಸ್ಯೆ ಜಯಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕ ರಾಜು, ತರಬೇತಿಗಾರ್ತಿ ಶಾಮಲ ಮತ್ತಿತರರು ಹಾಜರಿದ್ದರು.
ತುಟ್ಟಿ ಭತ್ಯೆ ಏರಿಕೆಗೆ ನೌಕರರ ಸಂಘ ಹರ್ಷ
ಕೋಲಾರ: ರಾಜ್ಯ ಸರ್ಕಾರಿ ನೌಕರರಿಗೆ ಜ.1 ರಿಂದಲೇ ಪೂರ್ವಾನ್ವಯವಾಗುವಂತೆ ಶೇ.5 ತುಟ್ಟಿ ಭತ್ಯೆ ಏರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ಸ್ವಾಗತಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ನೌಕರರು ಈಗಾಗಲೇ ಶೇ.4 ತುಟ್ಟಿ ಭತ್ಯೆ ಪಡೆಯುತ್ತಿದ್ದು, ಇದರ ಜತೆಗೆ ಈಗ ಶೇ.5 ತುಟ್ಟಿ ಭತ್ಯೆ ಸೇರ್ಪಡೆಯಾಗಿದೆ ಎಂದು ತಿಳಿಸಿದ್ದಾರೆ. ನೌಕರರಿಗೆ ತುಟ್ಟಿ ಭತ್ಯೆ ಏರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂದರ್ಭದಲ್ಲಿ ಸಹಕರಿಕಾರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.