ತುಮಕೂರು

ಕಾಂಗ್ರೆಸ್‌ಗೆ ಜೆಡಿಎಸ್ ಬೆಂಬಲಿಸಿದ್ದರಿಂದ ನನ್ನ ಸೋಲು'

Published On :

ಗೌರಿಬಿದನೂರು: ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಮುಖಂಡರು ಕೊನೆ ಗಳಿಗೆಯಲ್ಲಿ ಬೆಂಬಲಿಸಿದ್ದೇ ನನ್ನ ಸೋಲಿಗೆ ಕಾರಣವಾಯಿತು ಎಂದು ಗೌರಿಬಿದನೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಜಯಪಾಲರೆಡ್ಡಿ ತಿಳಿಸಿದರು.
ಸ್ವಗೃಹದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಸೋತಿಲ್ಲ. ಎರಡನೇ ಸ್ಥಾನವನ್ನು ಪಡೆದಿದ್ದೇನೆ. ಯಾವುದೇ ಕಾರಣಕ್ಕೂ ರಾಜಕೀಯದಿಂದ ಪಲಾಯನ ಮಾಡುವುದಿಲ್ಲ. ನನ್ನ ಜನಸೇವೆ ಎಂದಿನಂತೆ ನಿರಂತರವಾಗಿರಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ಹೇಳಿಕೆ ಖಂಡನೀಯ. ಚುನಾವಣೆಯಲ್ಲಿ ನನ್ನ ಬೆಂಬಲಿಸಿ ನಿಮಗೆ ಎಂಪಿ ಚುನಾವಣೆಯ ಬಿಜೆಪಿ ಟಿಕೆಟ್ ಬಿಟ್ಟುಕೊಡುತ್ತೇನೆ ಎಂದು ನಮ್ಮ ಮನೆ ಬಾಗಿಲಿಗೇ ಅವರು ಬಂದು ಕೇಳಿದ್ದರು. ಅದಕ್ಕೊಪ್ಪದ್ದರಿಂದ ಅವರು ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ಗ್ರಾಮಮಟ್ಟದಿಂದ ಪಕ್ಷವನ್ನು ಕಟ್ಟುತ್ತೇವೆ. ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಿಗೂ  ನಮ್ಮ ಕಾರ್ಯಕರ್ತರನ್ನು ನಿಲ್ಲಿಸುತ್ತೇವೆ. ಜನರ ಸಮಸ್ಯೆಗಳಿಗೆ ಎಂದಿನಂತೆ ಸ್ಪಂದಿಸುತ್ತೇವೆ ಎಂದರು.
ಜೆಡಿಎಸ್ ಪಕ್ಷಕ್ಕೆ ಸೇರುವ ತಯಾರಿಯಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮಗೆ ಯಾವುದೇ ಪಕ್ಷದಿಂದ ಆಹ್ವಾನ ಬಂದಿಲ್ಲ. ಬಂದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು.
ಈಗಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಆ ಪಕ್ಷಗಳ ಮುಖಂಡರ ಬಗ್ಗೆ ಹತಾಶರಾಗಿ ನಮ್ಮ ಪಕ್ಷಕ್ಕೆ ಸೇರಲು ನನ್ನ ಸಂಪರ್ಕದಲ್ಲಿದ್ದಾರೆ.
ಮುಂಬರುವ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಆರ್.ಅಶೋಕ್‌ಕುಮಾರ್ ಮಾತನಾಡಿದರು. ಆರ್.ಅಶೋಕಕುಮಾರ್, ವೇಣುಗೋಪಾಲರೆಡ್ಡಿ, ವಿವೇಕಾನಂದರೆಡ್ಡಿ, ರಾಮಕೃಷ್ಣ, ಬಾಬುರೆಡ್ಡಿ ಅಜಿತಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.