ತುಮಕೂರು

ಕಾರು- ಬೈಕ್ ಡಿಕ್ಕಿ: ಸವಾರ ಸಾವು

Published On :

ಮೈಸೂರು: ಮಾರುತಿ ಒಮ್ನಿ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಟಿ.ಕೆ. ಬಡಾವಣೆ ನಿವಾಸಿ ಬಸವರಾಜು (55) ಮೃತಪಟ್ಟವರು. ಇವರು ಬೈಕಿನಲ್ಲಿ ಸರಸ್ವತಿಪುರಂ ವಿಶ್ವಮಾನವ ಜೋಡಿ ರಸ್ತೆ ಬೇಕ್ ಪಾಯಿಂಟ್ ಬಳಿ ಹೋಗುತ್ತಿದ್ದ ವೇಳೆ ಮಾರುತಿ ಒಮ್ನಿ ವಾಹನ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುವೆಂಪುನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಪಘಾತ: 6 ಮಂದಿಗೆ ಗಾಯ
ಮೈಸೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ 6 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಮೈಸೂರು ತಾಲೂಕು ಇಲವಾಲ ಬಳಿಯ ಚಿಕ್ಕೇಗೌಡನಕೊಪ್ಪಲು ನಿವಾಸಿಗಳಾದ ಶಿವಣ್ಣ, ಇಂದ್ರೇಗೌಡ, ಮಾಯೇಗೌಡ, ಮಹದೇವಗೌಡ, ಚೇತನ ಮತ್ತು ಚಾಲಕ ಮರಿಯ್ಯ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಬಂಧಿಕರ ವಿವಾಹದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.