ತುಮಕೂರು

ಕುಣಿಗಲ್‌ನಲ್ಲಿ ಕೈ ಪಡೆ ಹರ್ಷ

Published On :

ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಪಟ್ಟಣದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿತ್ತು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಬ್ಯಾನರ್ ಹಾಕಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಅಹಿಂದ ನಾಯಕರಾಗಿ ಬೆಳೆದು, ಕಾಂಗ್ರೆಸ್ ಪಾಳೆಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ , ರಾಜ್ಯದ ಎಲ್ಲಾ ವರ್ಗದ ಜನತೆಗೆ ಸೂಕ್ತ ನ್ಯಾಯ ಒದಗಿಸಿ, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ಯಾವುದೇ ಅನುಮಾನ ಬೇಡ ಎಂದು ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರೆಹಮಾನ್ ಶರೀಫ್ ತಿಳಿಸಿದರು. ಪಟ್ಟಣದ ಕೋಟೆ ಪ್ರದೇಶದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ, ಜನತೆಗೆ ಸಿಹಿ ಹಂಚಿ, ಸಂಭ್ರಮಿಸಿ ಮಾತನಾಡಿದ ಅವರು, ರಾಜ್ಯದ ಹಣಕಾಸು ಸಚಿವರಾಗಿ ಅಪಾರ ಅನುಭವ ಹೊಂದಿರುವ ಸಿದ್ದರಾಮಯ್ಯ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಸಮಸ್ತ ಹಿಂದುಳಿದ ವರ್ಗದ ಜನತೆಗೆ ಸಂತಂಸದ ಸಂಗತಿಯಾದರೆ, ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಸದಾ ಮುಂದೆ ಎಂಬುದನ್ನು ಸಾಬೀತು ಪಡಿಸಿದಂತಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.