ತಾಲೂಕು ಅಭಿವೃದ್ಧಿಗೆ ಪ್ರಾಮಾಣಿಕ ಶ್ರಮ: ಜಗದೀಶ್ ನಾಗರಾಜಯ್ಯ
ಕ.ಪ್ರ.ವಾರ್ತೆ ಕುಣಿಗಲ್ ಮೇ 13
ಜಡ್ಡುಗಟ್ಟಿರುವ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಿ, ತಾಲೂಕಿನ ಜನತೆಗೆ ಉತ್ತಮ ಅಭಿವೃದ್ಧಿಪರ ಆಡಳಿತ ನೀಡುವ ದಿಸೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದೆಂದು ಯುವ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ಜಗದೀಶ್ ನಾಗರಾಜಯ್ಯ ತಿಳಿಸಿದರು.
ಸೋಮವಾರ, ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಕೆಲವೊಂದು ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಆಗುವ ಸಾಧ್ಯತೆ ಇದ್ದರೂ, ಹಿಂದಿನ ಶಾಸಕರ ನಿರ್ಲಕ್ಷ್ಯತೆಯಿಂದ ನೆನೆಗುದಿಗೆ ಬಿದ್ದಿವೆ. ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇದ್ದು ಸಮಸ್ಯೆ ಪರಿಹಾರಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದಲ್ಲದೆ, ಪಟ್ಟಣದಲ್ಲಿನ ಮುಖ್ಯರಸ್ತೆ ಸ್ವಚ್ಚತೆ, ಕಸವಿಲೇವಾರಿ, ಕುಡಿಯುವನೀರು ಪೂರೈಕೆಗೆ ಪುರಸಭೆ ಆಡಳಿತಕ್ಕೆ ಚುರುಕು ಮುಟ್ಟಿಸಿ, ಜನತೆಗೆ ಉತ್ತಮ ಸೌಕರ್ಯ ಕಲ್ಪಿಸುವ ಭರವಸೆ ನೀಡಿದರು. ಶಾಸಕ ಡಿ.ನಾಗರಾಜಯ್ಯ, ಯಾವುದೇ ಒಂದು ಪಕ್ಷಕ್ಕೇ ಸಿಮಿತವಾಗದೆ, ತಾಲೂಕಿನ ಸಮಗ್ರ ಅಭಿವೃದ್ದಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದರಲ್ಲಿ ಯಾವುದೇ ಅನುಮಾನ ಬೇಡ, ಶಾಸಕರು ಯಾವುದೇ ಸ್ವಾರ್ಥಪರ, ಸೇಡಿನ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡೋಲ್ಲಾ. ವಿರೋಧ ಪಕ್ಷಗಳ ಮುಖಂಡರು ಹೇಳಿಕೆಗಳಲ್ಲಿ ಯಾವುದೇ ಹುರುಳಿಲ್ಲ ಎಂದ ಅವರು, ಮಾಜಿ ಸಿಎಂ ಕುಮಾರಸ್ವಾಮಿ, ದೇವೆಗೌಡರ ಜನಪ್ರಿಯ ಕಾರ್ಯಕ್ರಮಗಳ ಜೊತೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ತಾಲೂಕಿನಾದ್ಯಂತ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿರುವ ಮಾಜಿ ಸಚಿವ ಡಿ.ನಾಗರಾಜಯ್ಯನವರನ್ನು ಕ್ಷೇತ್ರದ ಜನತೆ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಜೆಡಿಎಸ್ ಮುಖಂಡರಾದ ಗುರುಪ್ರಸಾದ್, ಸುರೇಶ್, ಶೇಷಾಚಲ, ರಂಗಸ್ವಾಮಿ, ಐಡಿಯಾ ಪ್ರಕಾಶ್, ಸ್ವಾಮಿ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

