ತುಮಕೂರು

'ಉತ್ತಮ ಶಿಕ್ಷಣ, ಫಲಿತಾಂಶಕ್ಕೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ'

Published On :

ಕ.ಪ್ರ. ವಾರ್ತೆ ,  ಪಾವಗಡ ,  ಮೇ 14
ಸರ್ಕಾರದ ಆದೇಶದಂತೆ ಮೇ 29ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಲಿದ್ದು ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಫಲಿತಾಂಶಕ್ಕೆ ತಮ್ಮ ಮಕ್ಕಳನ್ನು ಸರ್ಕಾರಿ ಪ್ರೌಢಶಾಲೆಗೆ ಸೇರಿಸಿ ಎಂದು ಸರ್ಕಾರಿ ಪಟ್ಟಣದ ಜೂನಿಯರ್ ಕಾಲೇಜ್ ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲ ಪಿ.ಗೋವಿಂದಪ್ಪ ಮನವಿ ಮಾಡಿದ್ದಾರೆ.
ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶ ಸೇರಿದಂತೆ ಗುಣಮಟ್ಟದ ಶಿಕ್ಷಣಕ್ಕಾಗಿ ತಮ್ಮ ಮಕ್ಕಳನ್ನು ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಸೇರಿಸಿ ಎಂದು ಪೋಷಕರಲ್ಲಿ ಅವರು ಮನವಿ ಮಾಡಿದ್ದಾರೆ.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ತೃಪ್ತಿಕರವಾದ ಉತ್ತಮ ಬೋಧಕ ವರ್ಗವಿದ್ದು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಶೇ.85ರಷ್ಟು ಫಲಿತಾಂಶ ಹೊರಬಿದ್ದಿದೆ. ಅತ್ಯುನ್ನತ ಶೇಣಿ, ಪ್ರಥಮ ಹಾಗೂ ದ್ವಿತೀಯ ಶ್ರೇಣಿ ಸೇರಿದಂತೆ ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಫಲಿತಾಂಶ ಬರುತ್ತಿದೆ ಎಂದರು.
ಶಾಲೆಯಲ್ಲಿ ಬಿಸಿಯೂಟ, ಉತ್ತಮ ಬೋಧನ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಅವಶ್ಯಕತೆ ಇರುವ ಪರಿಕಾರಗಳು ಸರ್ಕಾರ ಕಲ್ಪಿಸಿದ ಎಲ್ಲಾ ರೀತಿಯ ಸೌಲಭ್ಯಗಳು ಕಲ್ಪಿಸಲಾಗುವುದೆಂದರು. ವಿವರಗಳಿಗೆ ಸಂಪರ್ಕಿಸಿ, ಉಪ ಪ್ರಾಶುಪಾಲರು ಸರ್ಕಾರಿ ಜೂನಿಯರ್ ಕಾಲೇಜ್ ಪಾವಗಡ-9741316529.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.