ತುಮಕೂರು

'ತಿಮ್ಮರಾಯಪ್ಪ ಜಯ ಜನರದ್ದು'

Published On :

ಪಾವಗಡ: ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರ ಜಯ ತಾಲೂಕಿನ ಜನತೆಗೆ ಸಂದ ಜಯವೆಂದು ಜೆಡಿಎಸ್ ತಾ.ಅಧ್ಯಕ್ಷ ಎನ್.ತಿಮ್ಮಾರೆಡ್ಡಿ ಬಣ್ಣಿಸಿದರು.
ಅವರು ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಮತದಾರರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿ ಪಕ್ಷದ ಪರ ಮತ ನೀಡಿದ್ದಾರೆ. ಪಕ್ಷದ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರನ್ನು ಬೆಂಬಲಿಸಿ ಪಕ್ಷದ ಪರ ಮತ ನೀಡಿದ ಎಲ್ಲಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸೇರಿದಂತೆ ಜನರ ಸಮಸ್ಯೆ ನಿವಾರಣೆಗೆ ನಮ್ಮ ಹೋರಾಟ ನಿರಂತರವಾಗಿದೆ ಎಂದ ಅವರು ರಾಜಕೀಯ ಹಾಗೂ ಅವೈಜ್ಞಾನಿಕ ಹಿನ್ನೆಲೆಯಲ್ಲಿ ಈಗಾಗಲೇ ರದ್ದುಪಡಿಸಿದ ಮಾಸಾಶನವನ್ನು ಪುನರ್ ಪರೀಶಿಲಿಸಿ ಅರ್ಹರಿಗೆ ಕೂಡಲೇ ಮಸಾಶನ ಮಂಜೂರು ಮಾಡಿಸುವುದು. ರದ್ದಾದ ಪಡಿತರ ಕಾರ್ಡುಗಳನ್ನು ಸರ್ವೆ ಮಾಡಿಸಿ ಕೂಡಲೇ ಅರ್ಹರಿಗೆ ಪಡಿತರ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.
ಅಂಗವಿಕಲರಿಗೆ ವಿವಿಧ ರೀತಿಯ ಸೌಲಭ್ಯಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಮೀಸಲಾತಿಯಂತೆ ಶೇಕಡಾವಾರು ಸೌಲಭ್ಯಗಳ ಸಮರ್ಪಕ ಹಂಚಿಕೆ, ಗುಡಿಯಲು ರಹಿತ ಯೋಜನೆ ಅನುಷ್ಠಾನ ಸೇರಿದಂತೆ ತಾ. ಜ್ವಲಂತ ಸಮಸ್ಯೆಗಳಿಗೆ ಪಕ್ಷ ಬದ್ಧವಾಗಿದೆ ಎಂದು ಅವರು ತಿಳಿಸಿದರು. ತಾ.ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.