ತುಮಕೂರು

ಸಮಸ್ಯೆಗೆ ಸ್ಪಂದಿಸಲು ತಾಲೂಕಾಡಳಿತಕ್ಕೆ ಕೆಜೆಪಿ ಮನವಿ

Published On :

ತಿಪಟೂರು: ತಾಲೂಕಿನ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ತಾಲೂಕು ಕೆಜೆಪಿ ಸಂಘಟನಾ ಕಾರ್ಯದರ್ಶಿ ಆಲದಹಳ್ಳಿ ವಿಶ್ವನಾಥ್ ತಾಲೂಕು ಆಡಳಿತದ ವಿರುದ್ದ ಕೆಂಡಕಾರಿದ್ದಾರೆ.
ವಿದ್ಯುತ್ ಇಲಾಖೆಯ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯುಂಟಾಗಿದೆ. ತೋಟಗಾರಿಕೆ ಮತ್ತು ತರಕಾರಿ ಬೆಳೆಗಳಿಗೆ ನೀರು ಹಾಯಿಸಲು ರೈತರು ಪರದಾಡುವಂತಾಗಿದೆ. ಕುಡಿಯುವ ನೀರಿಗೂ ತೀವ್ರ ತೊಂದರೆಯಾಗಿದೆ.
ಇಲ್ಲಿನ ಕಂದಾಯ ಇಲಾಖೆ ಬಡವರ ವಿರೋಧಿ ನೀತಿ ಮತ್ತು ತೀವ್ರ ತಾರತಮ್ಯ ಅನುಸರಿಸುತ್ತಿದೆ. ನಗರದ ಸರ್ಕಾರಿ ಆಸ್ಪತ್ರೆ ಬಡವರ ಜೀವಗಳ ಜತೆ ಚೆಲ್ಲಾಟವಾಡುತ್ತಿರುವುದಲ್ಲದೆ ರೋಗಿಗಳನ್ನು ಬೇಕಾಬಿಟ್ಟಿಯಾಗಿ ನಡೆಸಿಕೊಳ್ಳುತ್ತಿದ್ದು, ಚಿಕಿತ್ಸೆಗಾಗಿ ಅಂಗಲಾಚಬೇಕಾಗಿದೆ. ತಾಲೂಕು ಆಡಳಿತವು ಕೂಡಲೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಜನಪರ ಆಡಳಿತ ನೀಡಲು ಮುಂದಾಗದಿದ್ದರೆ ತಿಪಟೂರು ತಾಲೂಕು ಕೆಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆಂದು ವಿಶ್ವನಾಥ್, ಹಿಂಡಿಸ್ಕೆರೆ ಶಿವಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.