ಉದಯ ಭಾರತಿ ಕಾಲೇಜು ಮಾನ್ಯತೆ ರದ್ದತಿಗೆ 'ಹೈ' ತಡೆಯಾಜ್ಞೆ: ಶಿವಯ್ಯ
ಕ.ಪ್ರ. ವಾರ್ತೆ , ತಿಪಟೂರು , ಮೇ 15
ನಗರದಲ್ಲಿರುವ ಉದಯ ಭಾರತಿ ಪದವಿ ಪೂರ್ವ ಕಾಲೇಜುಗಳ ಮಾನ್ಯತೆ ರದ್ದುಪಡಿಸಿ ಸರ್ಕಾರ ಕಳೆದ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶಕ್ಕೆ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಉದಯ ಭಾರತಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉದಯ ಭಾರತಿ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನ ಎಲ್ಲಾ ಕಾಲೇಜುಗಳು ಶೈಕ್ಷಣಿಕವಾಗಿ ಉತ್ತಮ ಫಲಿತಾಂಶ ಮತ್ತು ಉತ್ತಮ ಆಡಳಿತ ನಿರ್ವಹಣೆ ನಡೆಸುತ್ತಿವೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಸರ್ಕಾರದ ಪೂರ್ವಾನುಮತಿ ಪಡೆಯದೆ ಶಿಕ್ಷಣ ಸಂಸ್ಥೆಯನ್ನು ಟ್ರಸ್ಟಾಗಿ ಪರಿವರ್ತಿಸಲಾಗಿದೆ. ಇದು ಕಾನೂನು ಬಾಹಿರವಾಗಿದ್ದು, ಹಲವು ಆಡಳಿತಾತ್ಮಕ ಸಮಸ್ಯೆ ಸೃಷ್ಟಿಸಿದೆ ಎಂದು ಆರೋಪಿಸಿ ವಕೀಲರೊಬ್ಬರು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ಶಿಕ್ಷಣ ಇಲಾಖೆ ತುರುವೇಕೆರೆ, ತಿಪಟೂರು ಉದಯ ಭಾರತಿ ಕಾಲೇಜುಗಳ ಮಾನ್ಯತೆ ರದ್ದು ಮಾಡಿ ಮಾರ್ಚ್ 4ರಂದು ಆದೇಶ ಹೊರಡಿಸಿತ್ತು. ಟ್ರಸ್ಟ್ ಸದರಿ ಆದೇಶದ ವಿರುದ್ದ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು. ಹೈಕೋರ್ಟ್ ಸರ್ಕಾರದ ಆದೇಶವನ್ನು ಉಲ್ಲೇಖಿಸಿ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ ಏ. 4ರಂದು ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ತಿಳಿಸಿದ್ದಾರೆ.
2013-14ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕಲಾ, ವಾಣಿಜ್ಯ, ವಿಜ್ಞಾನ ಅಧ್ಯಯನ ವಿಷಯಗಳಿಗೆ ಪ್ರವೇಶ ಪಡೆದುಕೊಳ್ಳಬಹುದು ಎಂದು ಆಡಳಿತ ಸಂಸ್ಥೆ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

