ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಷಡಕ್ಷರಿ
ಕ.ಪ್ರ. ವಾರ್ತೆ , ತಿಪಟೂರು , ಮೇ 17
ಬದಲಾದ ರಾಜಕೀಯ ಸನ್ನಿವೇಶದಲ್ಲಿ ನನ್ನ ಮತ್ತು ಜನತೆಯ ನಿರೀಕ್ಷೆಗೆ ತಕ್ಕಂತೆ ಸ್ಪಂದಿಸುವ ಅಧಿಕಾರಿಗಳ ಅವಶ್ಯಕತೆ ಇದ್ದು ಅವರಿಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ ಎಂದು ನೂತನ ಶಾಸಕ ಕೆ. ಷಡಕ್ಷರಿಯವರು ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅವರು ಇಲಾಖಾವಾರು ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿ, ತಾಲೂಕು ಭೀಕರ ಬರಗಾಲಕ್ಕೆ ಈಡಾಗಿದ್ದು ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ವಿದ್ಯುತ್ ಸಮಸ್ಯೆ ಒಂದೆಡೆಯಾದರೆ ಅಧಿಕಾರಿಗಳ ನಿರ್ಲಕ್ಷ್ಯ ಅತಿಯಾಗಿದೆ. ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ನನ್ನ ಜೊತೆ ಕೆಲಸ ಮಾಡಲಾಗದ ಅಧಿಕಾರಿಗಳು ತಾವೇ ವರ್ಗಾವಣೆ ಪಡೆಯಬಹುದು ಎಂದರಲ್ಲದೆ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಸದಾ ನನ್ನ ಸಹಕಾರ ಇದ್ದೇ ಇರುತ್ತದೆ ಎಂದೂ ತಿಳಿಸಿದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಪಿಡಿಓಗಳು ಕಚೆರಿ ಸಮಯದಲ್ಲಿ ಕಡ್ಡಾಯವಾಗಿ ಹಾಜರಿದ್ದು ಕಾರ್ಯ ನಿರ್ವಹಿಸಬೇಕು. ಮೀಟಿಂಗ್ ನೆಪದಲ್ಲಿ ಕದಿಯುವವರನ್ನು ಸಹಿಲಾಗಲ್ಲ. ಆಚೆ ಹೋಗುವಾಗ ಕಡ್ಡಾಯವಾಗಿ ಪುಸ್ತಕದಲ್ಲಿ ನಮೂದಿಸಬೇಕು. ದಿಢೀರ್ ಭೇಟಿ ಕಾರ್ಯಕ್ರಮದಲ್ಲಿ ಕದಿಯುವವರಿಗೆ ಪಾಠ ಕಲಿಸಲಾಗುವುದು. ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಸಾಕಷ್ಟು ಕೆಲಸ ಮಾಡಬೇಕಿದೆ. ಅಗತ್ಯ ಗೊಬ್ಬರ ದಾಸ್ತಾನಿಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರ ದಲಿತರಿಗೆ ವಿವಿಧ ನಿಗಮಗಳು ನೀಡಿರುವ ಸಾಲಗಳನ್ನು ಮನ್ನಾ ಮಾಡಿದ್ದು ಮುಂದಿನ ಹೊಸ ಸಾಲಗಳಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಭಾಗ್ಯಜ್ಯೋತಿ ಯೋಜನೆಯ ಬಡವರ ಬಾಕಿಯನ್ನು ಮನ್ನಾ ಮಾಡಿದ್ದು ಕಡಿತಗೊಳಿಸಿರುವುಗಳಿಗೆ ತುರ್ತಾಗಿ ಸಂಪರ್ಕ ಕಲ್ಪಿಸಿಬೇಕೆಂದು ತಾಕೀತು ಮಾಡಿದರು.
ಕೊಬ್ಬರಿ ಧಾರಣೆ ತೀವ್ರವಾಗಿ ಕುಸಿತಗೊಂಡಿದ್ದು ಸರ್ಕಾರದ ಜೊತೆ ಕೂಡಲೆ ಮಾತನಾಡಿ ನಫೆಡ್ ಮೂಲಕ ಬೆಂಬಲ ಬೆಲೆಗೆ ಕೊಬ್ಬರಿ ಕೊಳ್ಳುವ ವ್ಯವಸ್ಥೆ ಮಾಡಲಿದ್ದು ಈಗಿರುವ ಪ್ರೋತ್ಸಾಹ ಬೆಲೆಯನ್ನು 1ಸಾವಿರ ರೂಗಳಿಗೆ ಏರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಇಓ ಕೃಷ್ಣಾರೆಡ್ಡಿ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

