ಎಲ್ಪಿಜಿ ಗ್ರಾಹಕರ ಆಧಾರ್ ಸೀಡಿಂಗ್ ಮೇಳ
ತುಮಕೂರು: ಕೇಂದ್ರ ಸರ್ಕಾರದ ನಿರ್ಧಾರದನ್ವಯ ಎಲ್.ಪಿ.ಜಿ. ಗ್ರಾಹಕರಿಗೆ ಸಬ್ಸಿಡಿ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುವ ನೇರ ನಗದು ವರ್ಗಾವಣೆ ಯೋಜನೆ ಜಿಲ್ಲೆಯಲ್ಲಿ ಜಾರಿಯಾಗಲಿದೆ.
ಎಲ್ಲಾ ಎಲ್.ಪಿ.ಜಿ. ಗ್ರಾಹಕರು ತಮ್ಮ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕಿನ ಉಳಿತಾಯ ಖಾತೆ ಸಂಖ್ಯೆಯನ್ನು ನೀಡಿದಲ್ಲಿ ಎಲ್.ಪಿ.ಜಿ. ಸಿಲಿಂಡರ್ಗಳಿಗೆ ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರ ಉಳಿತಾಯ ಖಾತೆಗೆ ವರ್ಗಾಯಿಸಲಿದ್ದು, ಸಿಲಿಂಡರ್ಗೆ ಪ್ರತಿ ಗ್ರಾಹಕರು ಪೂರ್ಣ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಗರದ ಎಲ್.ಪಿ.ಜಿ. ಗ್ರಾಹಕರು ತಮ್ಮ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕಿನ ಉಳಿತಾಯ ಖಾತೆ ನಂಬರುಗಳನ್ನು ತಮ್ಮ ಎಲ್.ಪಿ.ಜಿ. ಏಜೆನ್ಸಿಗಳಿಗೆ ನೀಡುವ ಹಾಗೂ ಆಧಾರ್ ಸೀಡಿಂಗ್ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗ್ರಾಹಕರ ಅನುಕೂಲಕ್ಕಾಗಿ ತುಮಕೂರು ನಗರಸಭೆ ಆವರಣದಲ್ಲಿ ನಗರದ ಎಲ್ಲಾ ಗ್ಯಾಸ್ ಸರಬರಾಜುದಾರರ ಹಾಗೂ ಬ್ಯಾಂಕ್ಗಳ ಅಧಿಕಾರಿಗಳನ್ನೊಳಗೊಂಡಂತೆ ಗ್ಯಾಸ್ ಆಧಾರ್ ಸೀಡಿಂಗ್ ಮೇಳವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಹಕರು ಆಧಾರ್ ಕಾರ್ಡ್ ಮೂಲಪ್ರತಿ ಹಾಗೂ ಬ್ಯಾಂಕ್ ಅಕೌಂಟ್ ವಿವರ, ಗ್ಯಾಸ್ ಪುಸ್ತಕಗಳೊಂದಿಗೆ ಹಾಜರಾಗಿ ಈ ಸದವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

