ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ
ಶಿರಾ: 2013-14ನೇ ಸಾಲಿನಲ್ಲಿ ಶಿರಾ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಟ್ಟಣದ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಕಳ್ಳಂಬೆಳ್ಳ, ಹುಯಿಲ್ದೊರೆ, ಚಂಗಾವರ, ಲಕ್ಕನಹಳ್ಳಿ, ಬರಗೂರು, ಹಾರೋಗೆರೆ, ತಾವರೆಕೆರೆ ಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಲ್ಲಿ 6 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಕರೆಯಲಾಗಿದ್ದು ಶೇ. 75 ಪ.ಜಾತಿಯ, ಹಾಗೂ ಶೇ. 25 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿದ್ದು ಶೇ. 25 ಸ್ಥಾನಗಳಲ್ಲಿ ಶೇ. 8 ಸ್ಥಾನಗಳು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಸ್ತ, ಬೌದ್ಧ ಮತ್ತು ಜೈನ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಸದರಿ ವಿದ್ಯಾರ್ಥಿ ನಿಲಯಗಳಿಗೆ ಸೇರಲಿಚ್ಛಿಸುವ ಬಾಲಕ, ಬಾಲಕಿಯರು ನಿಗಧಿತ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಆಯಾ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರುಗಳಿಗೆ ಅಥವಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಶಿರಾ ಇವರ ಕಚೇರಿಗೆ ಸಲ್ಲಿಸತಕ್ಕದ್ದು. ಮೇಲ್ಕಂಡ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಊಟ, ತಿಂಡಿ, ವ್ಯವಸ್ಥೆ, ಪಠ್ಯಪುಸ್ತಕ, ಲೇಖನ ಸಾಮಗ್ರಿಗಳು ಸಿದ್ಧಪಡಿಸಿದ ಸಮವಸ್ತ್ರ ಸೋಪು, ಎಣ್ಣೆ, ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯ: ಸಿ.ಸಿ. ಪಾವಟೆ
ಕ.ಪ್ರ. ವಾರ್ತೆ ತುಮಕೂರು ಮೇ 18
ಗ್ರಾಮದ ಸಂಪತ್ತು ಅನಗತ್ಯವಾಗಿ ಹೊರ ಹೋಗದಂತೆ ತಡೆದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ತುಮಕೂರಿನ ಮಿತ್ರ ಸಂಸ್ಥೆಯ ಸ್ಥಾಪಕ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಸಿ.ಸಿ ಪಾವಟೆ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಹೇಮಾದ್ರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜವನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ 10 ದಿನಗಳ ಶಿಬಿರದಲ್ಲಿ ಗ್ರಾಮಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಹಿಂದೆ ಭಾರತ ಸ್ವಾವಲಂಭಿ ಗ್ರಾಮಗಳಿಂದ ಕೂಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮದ ಸಂಪತ್ತು ವಿದೇಶಿ ವಸ್ತುಗಳ ವ್ಯಾಮೋಹದಿಂದ, ನಮ್ಮ ದುಡಿಮೆ ಕೆಲವೇ ಕೆಲವರ ಪಾಲಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಕಾರ್ಯಪ್ರವೃತ್ತರಾಗಬೇಕು. ಗ್ರಾಮದ ಸಂಪತ್ತು ಅನಗತ್ಯವಾಗಿ ಹೊರ ಹೋಗದಂತೆ ತಡೆದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯು ಜಾಗೃತರಾಗಬೇಕಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

