ವಿಶೇಷ ಪೂಜೆ, 101 ತೆಂಗಿನ ಕಾಯಿ ಒಡೆದು ಹರಕೆ ಪೂರೈಕೆ
ಕ.ಪ್ರ. ವಾರ್ತೆ ಮಧುಗಿರಿ ಮೇ 18
ಮಧುಗಿರಿ ಕಸಬಾ ಮರುವೇಕೆರೆ ಗ್ರಾಮ ಪಂಚಾಯಿತಿ ತವಕದಹಳ್ಳಿ ಗ್ರಾಮಸ್ಥರು ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರು ಅತ್ಯಧಿಕ ಮತಗಳಿಂದ ಗೆಲ್ಲಬೇಕು ಎಂದು ಶ್ರೀಮೀನಗೊಂದಿ ಮಲ್ಲೇರಂಗನಾಥಸ್ವಾಮಿಗೆ ಹರಕೆ ಹೊತ್ತಿದ್ದರು. ಅದೇ ರೀತಿ ಮಧುಗಿರಿ ಕ್ಷೇತ್ರದ ಜನರ ಆಶೀರ್ವಾದದಿಂದ ಕೆ.ಎನ್.ರಾಜಣ್ಣ ಅತ್ಯಧಿಕ ಮತ ಪಡೆದು ಗೆದ್ದಿರುವ ಹಿನ್ನೆಲೆಯಲ್ಲಿ ಆ ಗ್ರಾಮದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಒಗ್ಗೂಡಿ ಹರಕೆ ತಿರೀಸುವ ಸಲುವಾಗಿ ಶ್ರೀಮೀನಗೊಂದಿ ಮಲ್ಲೇರಂಗನಾಥಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನ ಕಾಯಿ ಒಡೆದು ಹರಕೆ ತೀರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗೌರಮ್ಮ ರಾಮಾಂಜಿನಪ್ಪ, ಗ್ರಾ.ಪಂ.ಸದಸ್ಯ ಲಕ್ಷ್ಮೀನರಸಪ್ಪ, ರಂಗಪ್ಪ, ಬಂದ್ರೇಹಳ್ಳಿ ಮಂಜುನಾಥ್, ಮೂರ್ತಿ, ರಾಮಚಂದ್ರಪ್ಪ, ಗ್ರಾಮಸ್ಥರು ಉಪಸ್ಥಿತರಿದ್ದರು.
20 ರಿಂದ ಬೇಸಿಗೆ ಶಿಬಿರ
ಮಧುಗಿರಿ: ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಧುಗಿರಿ ಸಂಯುಕ್ತಾಶ್ರಯದಲ್ಲಿ ಮೇ 20 ರಿಂದ 29 ರವರೆಗೆ 5 ರಿಂದ 16 ವರ್ಷದೊಳಗಿನ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳ ಬಗ್ಗೆ ಬೇಸಿಗೆ ಶಿಬಿರವನ್ನು ಮಧುಗಿರಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಧುಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋಮಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಗೀತೆ, ಗೊಂಬೆ ತಯಾರಿಕೆ, ರಂಗೋಲಿ, ಎಂಬ್ರಾಯಿಡರಿ, ಯೋಗ, ಮೆಹಂದಿ, ಹೂ ತಯಾರಿಕೆ ಹೀಗೆ ಹತ್ತು ಹಲವು ರೀತಿಯ ಬಗ್ಗೆ ಕಾರ್ಯಾಗಾರ ತಯಾರಿಕೆ ಹಾಗೂ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಲಾಗುವುದು. ಈ ಶಿಬಿರಕ್ಕೆ ವಯೋವುತಿಯ ಆಸಕ್ತ ಮಕ್ಕಳು ಮೇ 20ರ ಬೆಳಿಗ್ಗೆ 11 ಗಂಟೆ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದ್ದಾರೆ.
30, ಶಿರಾ ತಾಪಂ ಸಾಮಾನ್ಯ ಸಭೆ
ಶಿರಾ: ಮೇ 30ರ ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯನ್ನು ತಾ.ಪಂ. ಅಧ್ಯಕ್ಷರಾದ ಗಂಗಮ್ಮ ಸಿದ್ದಹನುಮಯ್ಯ ಅವರ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಸದರಿ ಸಭೆಗೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಪ್ರತಿನಿಧಿಗಳನ್ನು ನಿಯೋಜಿಸದೆ ತಾವೇ ಖುದ್ದಾಗಿ ಹಾಜರಾಗಲು ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

