'ನೈತಿಕ ಶಿಕ್ಷಣ ಕಲಿಸುವುದು ಜಾಗತೀಕರಣದಲ್ಲಿ ಅವಶ್ಯ'
ಕ.ಪ್ರ.ವಾರ್ತೆ ಗುಬ್ಬಿಮೇ 22
ಶಿಕ್ಷಣದ ಜೊತೆಗೆ ಸಾಮಾಜಿಕ ಬದುಕು ರೂಪಿಸುವ ಮಾನವೀಯ ಮೌಲ್ಯಗಳು ಮತ್ತು ನೈತಿಕ ಶಿಕ್ಷಣವನ್ನು ಕಲಿಸುವುದು ಇಂದಿನ ಜಾಗತೀಕರಣದಲ್ಲಿ ಅವಶ್ಯವಿದೆ ಎಂದು ಅಕ್ಷರ ದಾಸೋಹ ಯೋಜನೆಯ ಸಹ ನಿರ್ದೇಶಕ ಎಸ್.ಜಯಕುಮಾರ್ ತಿಳಿಸಿದರು.
ಗುಬ್ಬಿ ಪಟ್ಟಣದ ಚಿದಂಬರಾಶ್ರಮದಲ್ಲಿ ಬುಧವಾರ ಪ್ರಥಮಿಕ ಶಾಲಾ ಶಿಕ್ಷಕರಿಗೆ ನಡೆದ ಮಾರ್ಗದರ್ಶಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಶಿಕ್ಷಕರಿಗೆ ಜ್ಞಾನ, ಕೌಶಲ್ಯ, ವಿಮರ್ಶಾತ್ಮಕ ಚಿಂತನೆ ಮತ್ತು ಅಧ್ಯಯನ ಅವಶ್ಯಕತೆ ಇದ್ದು ಆಧುನಿಕ ಪಠ್ಯಕ್ರಮಗಳಗೆ ಅನುಗುಣವಾಗಿ ಬೋಧನ ವಿಧಾನವನ್ನು ಕ್ರಿಯಾಶೀಲಗೊಳಿಸಿಕೊಳ್ಳಲು ತಿಳಿಸಿದ ಅವರು ಮಕ್ಕಳಿಗೆ ಪೌಷ್ಠಿಕತೆಯುಳ್ಳ ಆಹಾರವನ್ನು ವಿತರಿಸಲು ಕ್ರಮ ಕೈಗೊಳ್ಳುಂತೆ ಶಿಕ್ಷಕರಿಗೆ ತಿಳಿಸಿದರು.
ಪಠ್ಯೇತರ ಚಟುವಟಿಕೆಗೆ ಮೊದಲ ಆದ್ಯತೆ ನೀಡಿ ಮೌಲ್ಯಾಧಾರಿತ ಶಿಕ್ಷಣ ಒದಗಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಈಗಾಗಲೇ ಪ್ರಾಥಮಿಕ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಶಾಲಾನುದಾನ, ಶಾಲಾ ನಿರ್ವಹಣಾ ಅನುದಾನ ಸೇರಿದಂತೆ ಪಾಠೋಪಕರಣ ಮತ್ತು ಪೀಠೋಪಕರಣಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು ಅದರ ಸಮರ್ಪಕ ಬಳಕೆಗೆ ಶಿಕ್ಷಕರು ಮುಂದಾಗಬೇಕು. ಮಕ್ಕಳ ಹಾಜರಾತಿ ಸೇರಿದಂತೆ ಶಾಲೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಲು ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ ಎಂದರು. ಡಯಟ್ ಪ್ರಾಂಶುಪಾಲ ಈಶ್ವರಯ್ಯ ಮಾತನಾಡಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಗುಣಾತ್ಮಕ ಶಿಕ್ಷಣ ಹಾಗೂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸವಲತ್ತುಗಳನ್ನು ನಿಗದಿತ ಅವಧಿಯಲ್ಲಿ ಪೂರೈಸಲು ಸಂಪೂರ್ಣ ಗಣಕೀಕರಣಗೊಳಿಸಿ ಪ್ರತಿ ಶಾಲೆಯ ಶೈಕ್ಷಣಿಕ ಮಾಹಿತಿ ಸಂಗ್ರಹಿಸುವ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ 12759 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಸಿಎ ತರಬೇತಿ ನೀಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ನಡೆಯಬೇಕಾದ ವಾರ್ಷಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಶಿಕ್ಷಕರು ಮಾಹಿತಿಯನ್ನು ಸರಿಯಾಗಿ ಅರಿತು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕರೆ ನೀಡಿದರು. ಬಿಆರ್ಸಿ ನರೇಂದ್ರಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್,ಇಸಿಒಗಳಾದ ಗಂಗಾಧರ್, ಕೆ.ವಿ.ಚಿಕ್ಕಣ, ಗುರುಸಿದ್ದಯ್ಯ, ಹನುಮಂತರಾಯ, ಚಂದ್ರಶೇಖರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

