ತುಮಕೂರು

ಕಲ್ಪತರು ಕಾಲೇಜು ಶೌಚಗುಂಡಿ ದುರ್ವಾಸನೆಗೆ ನಾಗರಿಕರ ಆಕ್ರೋಶ

Published On :

ತಿಪಟೂರು: ರಾಜ್ಯದಲ್ಲಿಯೇ ಪ್ರಸಿದ್ಧ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಹೆಸರಾಂತ ತಿಪಟೂರು ನಗರದ ಕಲ್ಪತರು ವಿದ್ಯಾಸಂಸ್ಥೆ ತನ್ನ ಕಾಲೇಜು ಕ್ಯಾಂಪಸ್ ಆವರಣದ ಸಂಜೀವಿನ ವನದಲ್ಲಿ ದೊಡ್ಡದಾದ ಗುಂಡಿ ಮಾಡಿ ಕಲ್ಪತರು ಲೇಡಿಸ್ ಹಾಸ್ಟೆಲ್  ಶೌಚಾಲಯ ನೀರು ಹಾಗೂ ತ್ಯಾಜ್ಯವನ್ನು ಸಂಗ್ರಹಿಸುತ್ತಿದೆ. ಆದರೆ ಈ ಕೊಳಚೆ ನೀರಿನ ದುರ್ವಾಸನೆಯಿಂದ ಹಿಂಭಾಗದಲ್ಲಿರುವ ಬಿಸಿಎಂ ಲೇಡಿಸ್ ಕಾಲೇಜಿನ ಮತ್ತು ಅಕ್ಕಪಕ್ಕದ ಮನೆಯವರು ವಾಸ ಮಾಡುವುದು ಕಷ್ಟವಾಗಿದೆ. ಇವರು ನಾನಾ ರೀತಿಯ ರೋಗರುಜಿನಗಳಿಗೆ ತುತ್ತಾಗುತ್ತಿದ್ದು, ಈ ಬಗ್ಗೆ ನಗರಸಭೆ ಹಾಗೂ ಕಾಲೇಜು ಆಡಳಿತ ಮಂಡಳಿಗೆ ಹತ್ತಾರು ಬಾರಿ ದೂರು ನೀಡಿದ್ದರೂ ಸಮಸ್ಯೆ ಮಾತ್ರ ಸಮಸ್ಯೆಯಾಗಿಯೇ ಮುಂದುವರೆಯುತ್ತಿದೆ.
ಕಾಲೇಜು ಕ್ಯಾಂಪಸ್ ಪಕ್ಕದ ವಿದ್ಯಾನಗರ ಹೊಸಬಡಾವಣೆ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಮಕ್ಕಳೂ ಈ ದುರ್ವಾಸನೆಯಿಂದಲೇ ಕಾಲಕಳೆಯುವಂತಾಗಿದೆ. ಈ ಬಗ್ಗೆ ನಾಗರಿಕರು ಮಾತ್ರ ದಿನನಿತ್ಯ ಹಿಡಿ ಶಾಪ ಹಾಕುತ್ತಿದ್ದು, ಈ ಬಗ್ಗೆ ನಗರಾಡಳಿತ ಸೂಕ್ತ ಕ್ರಮ ಕೈಗೊಂಡು ದುರ್ವಾಸನೆಗೆ ಮುಕ್ತಿ ನೀಡಬೇಕು ಮತ್ತು ಹೆಸರಾಂತ ವಿದ್ಯಾಸಂಸ್ಥೆಯಾಗಿರುವ ಕಲ್ಪತರು ವಿದ್ಯಾಸಂಸ್ಥೆ ಸಾರ್ವಜನಿಕರಿಗೆ ನೀಡುತ್ತಿರುವ ತೊಂದರೆಯನ್ನು ಸರಿಪಡಿಸಬೇಕೆಂದು ಸಾರ್ವಜನಿಕರು ಆಕ್ರೋಶ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.