ದಲಿತರನ್ನು ಮುಖ್ಯಮಂತ್ರಿ ಮಾಡಲು ಒತ್ತಾಯ
ಕ.ಪ್ರ. ವಾರ್ತೆ , ತುಮಕೂರು , ಮೇ 23
ಮುಂದಿನ 5 ವರ್ಷಗಳ ಅವಧಿಯ ಒಳಗಾಗಿ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದೆ.
ದೇಶ ಒಬ್ಬ ದಲಿತ ಪ್ರಧಾನಿಯನ್ನು ಕಾಣಲು ಸಾಧ್ಯವಾಗಲಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರನ್ನು ಓಟ್ಬ್ಯಾಂಕ್ ಮಾಡಿಕೊಂಡು ಕಾಂಗ್ರೆಸ್ ಪಕ್ಷ ಅವಕಾಶವಾದಿ ರಾಜಕಾರಣ ಮಾಡುತ್ತಲೇ ಬಂದಿದೆ. ಈ ಬಾರಿಯಾದರೂ ದಲಿತರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಅನಿಸಿತ್ತು. ಒಳಪಂಗಡ ಮರೆತು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೂ, ಕಡೇ ಪಕ್ಷ ಉಪಮುಖ್ಯಮಂತ್ರಿ ಸ್ಥಾನವನ್ನೂ ಕೂಡ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಕೂಡಲೇ ಆದೇಶ ನೀಡುವುದು. ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ದಲಿತರೊಬ್ಬರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂದು ದಲಿತ ಸಂಘಟನೆಗಳು ಒತ್ತಾಯಿಸಿವೆ.
ಜತೆಗೆ ವಿವಿಧ ಬೇಡಿಕೆಗಳನ್ನು ಕಾಂಗ್ರೆಸ್ ಸರ್ಕಾರದ ಮುಂದಿಟ್ಟಿವೆ.
ಒತ್ತಾಯ: ಸರ್ಕಾರಿ ಸೌಲಭ್ಯಗಳ ಫಲಾನುಭವಿಗಳ ಆಯ್ಕೆಯಲ್ಲಿ ಸ್ಥಳೀಯ ಶಾಸಕರಿಗಿರುವ ಪರಮಾಧಿಕಾರವನ್ನು ವಾಪಸು ಪಡೆದು, ನಿಷ್ಪಕ್ಷಪಾತವಾದ ಆಯ್ಕೆಗೆ ಅನುವು ಮಾಡಿಕೊಡಲು ಒತ್ತಾಯ. ಸರಳ ಖಾತೆ ಆಂದೋಲನ. ನಿವೇಶನ ಹಾಗೂ ವಸತಿ ನೀಡುವುದು. ಭೂ ರಹಿತ ದಲಿತರು, ಕೃಷಿ ಕಾರ್ಮಿಕರಿಗೆ ತಲಾ 5 ಹೆಕ್ಟೇರ್ ಯೋಗ್ಯ ಭೂಮಿ ನೀಡುವುದು. ದಲಿತರಿಗೆ ಮಂಜೂರಾಗಿದ್ದ ಭೂಮಿ ವಶಪಡಿಸಿಕೊಂಡಿರುವವರ ವಿರುದ್ಧ ಕ್ರಮ. ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ. ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ. ಜಾತಿವಾರು ಜನಗಣತಿಗೆ ಆಗ್ರಹ.
ದಲಿತರ ದೌರ್ಜನ್ಯ ಪ್ರಕರಣಗಳಲ್ಲಿನ ಆರೋಪಿಗಳಿಗೆ ಬಿ ರಿಪೋರ್ಟ್ ಹಾಕುವುದನ್ನು ತಡೆ ಹಿಡಿಯುವುದು.
ಪ್ರತಿಭಟನೆಯಲ್ಲಿ ರಾಜ್ಯ ದಲಿತ ಸಹಾಯವಾಣಿ ರಾಜ್ಯ ಗೌರವಾಧ್ಯಕ್ಷ ಮಲ್ಲಸಂದ್ರದ ದೇವರಾಜು, ಡಿಎಸ್ಎಸ್ ಜಿಲ್ಲಾ ಸಂಘಟಕ ಕೇಬಲ್ ರಘು, ದಲಿತ ವಿಮೋಚನಾ ಸೇನೆ ಗೌರವಾಧ್ಯಕ್ಷ ಆರ್. ರಾಮಕೃಷ್ಣ, ದಲಿತ ಸೇನೆ ಜಿಲ್ಲಾ ಸಮಿತಿ, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಸೋಮಶೇಖರ್, ಮಾದಿಗ ದಂಡೋರ ಯುವಸೇನೆ ಅಧ್ಯಕ್ಷ, ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಿ. ಶಾಂತರಾಜು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

