ತುಮಕೂರು

ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ

Published On :

ಪಾವಗಡ: 2013-14ನೇ ಸಾಲಿಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
6ರಿಂದ 10ನೇ ತರಗತಿಯವರೆವಿಗೆ ವ್ಯಾಸಂಗ ಮಾಡುತ್ತಿರುವ ಪ.ಜಾತಿ, ಪ.ವರ್ಗ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲಾಖೆ ವತಿಯಿಂದ ನಿಗದಿತಪಡಿಸಿದ ಅರ್ಜಿ ನಮೂನೆಯಲ್ಲಿ ದಾಖಲೆಗಳ ಸಹಿತ ಜೂನ್ 6 ರೊಳಗೆ ತಾವು ಸೇರಲಿಚ್ಛಿಸುವ ವಿದ್ಯಾರ್ಥಿ ನಿಲಯಗಳಿಗಾಗಲಿ ಅಥವಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಪಾವಗಡ ಇವರಿಗೆ ನೇರವಾಗಿ ಸಲ್ಲಿಸಬಹುದು.
ನವೀಕರಣ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ನೂತನವಾಗಿ ಪ್ರವೇಶ ಕೋರಿ ಬಂದ ಅರ್ಜಿಗಳನ್ನು ತಾಲೂಕು ಮಟ್ಟದ ಆಯ್ಕೆ ಸಮಿತಿ ಮೂಲಕ ಕೆಳಕಂಡ ವಿದ್ಯಾರ್ಥಿ ನಿಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಗ್ರಿ ವೈದ್ಯಕೀಯ ಸೌಲಭ್ಯ, ಬೋಧನಾ ವ್ಯವಸ್ಥೆ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುವುದು.
ಖಾಲಿ ಇರುವ ವಿದ್ಯಾರ್ಥಿನಿಲಯಗಳು, ಪಟ್ಟಣದಲ್ಲಿರುವ ಸರ್ಕಾರಿ ಬಾಲಕರ ವಿದ್ಯಾರ್ಥಿನಿಲಯ ಸೇರಿದಂತೆ  ವೈ.ಎನ್.ಹೊಸಕೋಟೆ, ತಿರುಮಣಿ, ವಳ್ಳೂರು, ಪಳವಳ್ಳಿ, ಎಸ್.ಆರ್.ಪಾಳ್ಯ, ಪಾವಗಡ ಟೌನ್, ದೊಮ್ಮತಮರಿ, ಹರಿಹರಪುರ, ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವರಗಳಿಗೆ  ಎಚ್.ಆರ್.ಚೌದರಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಪಾವಗಡ ಇವರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.