ತುಮಕೂರು

ಕಾವೇರಿ ಗ್ರಾಮೀಣ ಬ್ಯಾಂಕ್ ನೂತನ ಶಾಖೆ ಉದ್ಘಾಟನೆ

Published On :

ಕ.ಪ್ರ. ವಾರ್ತ್ಣೆ ತುಮಕೂರು , ಮೇ 24
ನಗರದ ಗೋಕುಲ ಬಡಾವಣೆಯಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್‌ನ 336ನೇ ಶಾಖೆಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಎ. ಶಿವಪ್ಪ ಉದ್ಘಾಟಿಸಿದರು.
ಹಲವಾರು ಉತ್ತಮ ಗ್ರಾಹಕ ಸ್ನೇಹಿ ಯೋಜನೆಗಳೊಂದಿಗೆ ಕಾವೇರಿ ಗ್ರಾಮೀಣ ಬ್ಯಾಂಕ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರ ಹಾಗೂ ಗ್ರಾಹಕರ ಸಹಕಾರದೊಂದಿಗೆ ಶಾಖೆ ಹೆಚ್ಚಿನ ಅಭಿವೃದ್ಧಿಯನ್ನು ಹೊಂದಲಿ ಎಂದು ಶುಭ ಹಾರೈಸಿದರು. ಬ್ಯಾಂಕ್‌ನ ತುಮಕೂರು ಪ್ರಾದೇಶಿಕ ವ್ಯವಸ್ಥಾಪಕ ಕೆ.ಟಿ. ಮಂಜುನಾಥಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಬ್ಯಾಂಕ್ ಸಂಪೂರ್ಣ ಸರ್ಕಾರಿ ಸ್ವಾಮ್ಯಕ್ಕೊಳಪಟ್ಟಿದ್ದು ವಾಣಿಜ್ಯ ಬ್ಯಾಂಕುಗಳಲ್ಲಿರುವಂತೆ ಎಲ್ಲಾ ಠೇವಣಿ ಹಾಗೂ ಸಾಲ ಯೋಜನೆಗಳು ಬ್ಯಾಂಕಿನಲ್ಲಿ ಲಭ್ಯವಿದೆ ಎಂದು ಹೇಳಿದರು.
ತುಮಕೂರು ನಗರದಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್‌ನ 5ನೇ ಶಾಖೆ ಇದಾಗಿದ್ದು ಜನತೆ ಬ್ಯಾಂಕಿನ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ನೂತನ ಶಾಖೆಯ ವ್ಯವಸ್ಥಾಪಕ ಬಿ. ಕಂಚಿರಾಯ, ಬ್ಯಾಂಕಿನ ಹಿರಿಯ ಅಧಿಕಾರಿಗಳಾದ ಕೆ. ರಾಘವೇಂದ್ರ, ಎಂ.ಎನ್. ಸುರೇಶ್ ಬಾಬು, ಎ.ಎನ್. ನೀಲಕಂಠ, ವಿ. ಶ್ರೀನಾಥ್, ಸಿ. ಶಿವಕುಮಾರ್, ಕೆ.ಬಿ. ಚಂದ್ರಶೇಖರ್, ಹೆಚ್.ಎನ್. ಕಿರಣ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.