ಇಂದು ಆರೋಗ್ಯ ತಪಾಸಣಾ ಶಿಬಿರ
ಹುಳಿಯಾರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಬೆಳಗ್ಗೆ ಉಚಿತ ಆರೋಗ್ಯ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಡಾ.ರವಿಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ್, ಡಾ.ಷಣ್ಮುಗ, ಡಾ.ಸದಾಶಿವಯ್ಯ, ಅರವಳಿಕೆ ವೈದ್ಯೆ ಡಾ.ಚಂದನ ಭಾಗವಹಿಸಲಿದ್ದು, ಉಚಿತವಾಗಿ ಅಸ್ತಮಾ, ಎದೆರೋಗ, ನಿದ್ರಾರೋಗ, ಟಿ.ಬಿ,ನ್ಯೋಮೋನಿಯಾ, ಎದೆಯ ಕ್ಯಾನ್ಸರ್, ಏಡ್ಸ್, ಅಲರ್ಜಿ, ಸೀನು ಇತರೆ ಎಲ್ಲಾ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರ ಕ್ರಮ ನೀಡಲಿದ್ದು, ಹುಳಿಯಾರು ಹಾಗೂ ಸುತ್ತಮುತ್ತಲಿನ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ಉಪಯೋಗ ಪಡೆಯುವಂತೆ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.9449605557, 9448342916 ಸಂಪರ್ಕಿಸಬಹುದಾಗಿದೆ.
ನಾಳೆ ಬಸವೇಶ್ವರ
ಜಯಂತಿ ಆಚರಣೆ
ಹುಳಿಯಾರು: ಹೋಬಳಿ ವೀರಶೈವ ಸಮಾಜ ಹಾಗೂ ಬಸವೇಶ್ವರ ಪತ್ತಿನ ಸಹಕಾರ ಸಂಘದವರು ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಪಟ್ಟಣದ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಹಮ್ಮಿಕೊಳ್ಳಲಾಗಿದೆ. ಕುಪ್ಪೂರು ಗದ್ದಿಗೆ ಸಂಸ್ಥಾನದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ ವಹಿಸಲಿದ್ದು, ಮಾಜಿ ಶಾಸಕರಾದ ಕೆ.ಎಸ್.ಕಿರಣ್ಕುಮಾರ್, ಜೆ.ಸಿ.ಮಾಧುಸ್ವಾಮಿ, ವೀರಶೈವ ಸಮಾಜದ ಕಾರ್ಯದರ್ಶಿಗಂಗಾಧರಯ್ಯ ಆಗಮಿಸಲಿದ್ದು, ಬಸವ ಸೇನೆ ಜಿಲ್ಲಾಧ್ಯಕ್ಷ ಗಂಗರಾಜು ಅನುಭಾವ ನಿವೇದನೆ ನಡೆಸಿಕೊಡುವರು. ಉತ್ಸವದ ಅಂಗವಾಗಿ ಇದೇ ದಿನ ಸಂಜೆ ಬಸವೇಶ್ವರ ಅಷ್ಠ ಮಂಡಲೋತ್ಸವ ನಡೆಯಲಿದ್ದು, ರಾಜ್ಯ ಪ್ರಶಸ್ತಿ ವಿಜೇತ ಬೆಳ್ತಂಗಡಿ ಗಿರಿಧರ ಶೆಟ್ಟಿ ಬೊಂಬೆ ಬಳಗದ ಹಾಲಕ್ಕಿ ಕುಣಿತ, ನಾದಸ್ವರ, ಕಡೂರಿನ ಬಸವಶ್ರೀ ಮಹಿಳಾ ತಂಡದವರಿಂದ ವೀರಗಾಸೆ, ಚಿಕ್ಕನಹಳ್ಳಿ ವಿರಭದ್ರೇಶ್ವರ ಜಾನಪದ ಕಲಾವಿದರ ಸಂಘದಿಂದ ವೀರಭದ್ರನ ಕುಣಿತ, ಕೆಂಕೆರೆ ಬಸವಕೇಂದ್ರ ಹಾಗೂ ಅಕ್ಕಮಹಾದೇವಿ ಮಹಿಳಾ ಸಂಘದಿಂದ ವಚನ ಗಾಯನ ಸೆರಿದಂತೆ ವಿವಿಧ ಜಾನಪದ ಕಲಾತಂಡಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು, ಅಮೋಘ ಮದ್ದುಗುಂಡಿನ ಪ್ರದರ್ಶನ ಉತ್ಸವದುದ್ದಕ್ಕೂ ನಡೆಯಲಿದ್ದು, ನಂತರ ಅನ್ನಸಂತರ್ಪಣೆ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

