ತುಮಕೂರು

ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

Published On :

ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಕಳೆದ ಕೆಲವು  ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಪಟ್ಟಣ ಪಂಚಾಯ್ತಿ ವತಿಯಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗ ಹಮ್ಮಿಕೊಂಡಿದ್ದ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಗುಬ್ಬಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದ್ದು, ತುರ್ತಾಗಿ ಪಟ್ಟಣದಲ್ಲಿ ತಲೆ ದೋರಿರುವ ಕುಡಿಯುನ ನೀರಿನ ಸಮಸ್ಯೆ ಬಗೆಹರಿಸಲು ಪಟ್ಟಣ ಪಂಚಾಯ್ತಿ ಸದಸ್ಯರ ಸಹಕಾರದಿಂದ ತ್ವರಿತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದ ಅವರು, ಗುಬ್ಬಿ ತಾಲೂಕಿನಾದ್ಯಂತ ಕುಡಿವ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮಗಳಿಗೆ 325 ಕೊಳವೆ ಬಾವಿಗಳನ್ನು ಹೊಸದಾಗಿ ಕೊರೆಸಲಾಗಿದ್ದು 110 ಕೊಳವೆ ಬಾವಿಗಳನ್ನು ರೀಬೋರ್ ಮಾಡಿಲಾಗಿದೆ ಕುಡಿವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಹೆಚ್ಚುವರಿಯಾಗಿ ಕೊಳವೆ ಬಾವಿ ಕೊರೆಸಿ ತಾಲೂಕಿನ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಪಪಂ ಮುಖ್ಯಾಧಿಕಾರಿ ಯೋಗಾನಂದ ಕುಮಾರ್,ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.