ದೊಡ್ಡಹಳ್ಳಿ ಗ್ರಾಮಕ್ಕೆ ವಾಜಪೇಯಿ ವಸತಿ ಶಾಲೆ ಮಂಜೂರು
ಪಾವಗಡ: ತಾಲೂಕಿನ ದೊಡ್ಡಹಳ್ಳಿ ಗ್ರಾಮಕ್ಕೆ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಂಜೂರಾಗಿದ್ದು ವಸತಿ ಶಾಲೆಯ ಮೇಲ್ವಿಚಾರಕರಾಗಿ ಸಮಾಜ ಕಲ್ಯಾಣಾಧಿಕಾರಿ ವೈ.ಆರ್. ಚೌದರಿಯವರನ್ನು ನಿಯೋಜಿಸಿರುವುದಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸಕ್ತ ಸಾಲಿಗೆ 10ಕೋಟಿ ವೆಚ್ಚದಲ್ಲಿ ದೊಡ್ಡಹಳ್ಳಿ ಗ್ರಾಮಕ್ಕೆ ಎ.ಬಿ.ವಾಜಪೇಯಿ ವಸತಿ ಶಾಲೆ ಮಂಜೂರಾಗಿದ್ದು ಉತ್ತಮ ನಿರ್ವಹಣೆ ಹಾಗೂ ಸ್ವಚ್ಛತೆ ಹಿನ್ನಲೆಯಲ್ಲಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಅವರ ಶಿಪಾರಸಿನ ಮೇರೆಗೆ ವಸತಿ ಶಾಲೆಯ ಮೇಲ್ವಿಚಾರಕರಾಗಿ ಸಮಾಜ ಕಲ್ಯಾಣಾಧಿಕಾರಿ ವೈ.ಆರ್. ಚೌದರಿಯನ್ನು ನಿಯೋಜಿಸಲಾಗಿದೆ.
ವಾಜಪೇಯಿ ವಸತಿ ಶಾಲೆ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಲಿದ್ದು ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ ದ್ವೀತಿಯ ಪಿಯುಸಿಯವರೆಗೆ ಅವಕಾಶವಿದ್ದು ಸುಮಾರು 500ಮಂದಿ ಬಡ ವಿದ್ಯಾರ್ಥಿಗಳಿಗೆ ಅವಕಾಶವಿದೆ.
ಪ್ರಸಕ್ತ ಸಾಲಿನಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುವ 80 ಮಂದಿ ಬಡ ವಿದ್ಯಾರ್ಥಿಗಳಿಗೆ ವಸತಿ ಶಾಲೆಯಲ್ಲಿ ಅವಕಾಶವಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ವೈ.ಆರ್. ಚೌದರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

