ತುಮಕೂರು

ಸಹಾಯಧನ ಸರಿಯಾಗಿ ಉಪಯೋಗವಾಗುತ್ತಿಲ್ಲ

Published On :

ಕ.ಪ್ರ. ವಾರ್ತೆ   ಶಿರಾ   ಮೇ 28
ಶಿರಾ, ಪಾವಗಡ, ಮಧುಗಿರಿ ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಳೆದ 4-5 ವರ್ಷಗಳಿಂದ ಬರದಿಂದ ತತ್ತರಿಸಿವೆ.
ರೈತನಿಗೆ ನೀಡುತ್ತಿರುವ ರಿಯಾಯಿತಿ ದರದ ಶೇಂಗಾ ಬೀಜವು ಮಾರುಕಟ್ಟೆಯಲ್ಲಿ ಸಿಗದೇ ಇರುವುದು ಒಂದೆಡೆಯಾದರೆ, ಸರ್ಕಾರ ನೀಡುತ್ತಿರುವ ಸಹಾಯಧನ ಸರಿಯಾಗಿ ಉಪಯೋಗವಾಗುತ್ತಿಲ್ಲ ಎಂದು ಶಿರಾ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎನ್.ಸಿ. ಮಂಜುನಾಥ್, ಉಪಾಧ್ಯಕ್ಷ ಕೆ.ಮುಕುಂದಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಇವರು ಈಗಾಗಲೇ ಕೃಷಿ ಇಲಾಖೆ ವತಿಯಿಂದ ಸಹಾಯ ಧನ ನೀಡುತ್ತಿದ್ದು ಪ್ರತಿ 30 ಕೆಜಿ ಶೇಂಗಾ 1400 ರೂ. ಪ್ರತಿ ಕ್ವಿಂಟಾಲ್‌ಗೆ 4700 ರೂ. ಭರಿಸಬೇಕಾಗಿದೆ. ಇದರಿಂದ ಪ್ರಯೋಜನವಾಗುತ್ತಿಲ್ಲ. ಮಾರುಕಟ್ಟೆ ದರವು 4000-4500 ರೂ. ಇದ್ದು ಸರ್ಕಾರ ನೀಡುವ ಸಹಾಯಧನವು ಯಾವುದೇ ಪ್ರಯೋಜನವಾಗುತ್ತಿಲ್ಲ.
ಸರ್ಕಾರ ಈ ಬಗ್ಗೆ ಯೋಚಿಸಿ ರೈತರಿಗೆ ಮಾರುಕಟ್ಟೆ ದರದಲ್ಲಿ ಶೇಕಡ 50 ರಿಯಾಯಿತಿ ದರದಲ್ಲಿ ನೀಡಬೇಕು ಮತ್ತು 100 ರು. ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸಬೇಕೆಂದು ಇವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.