'ಜಲಧಿಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಂಕುಸ್ಥಾಪನೆ '
ತುಮಕೂರು: ಕುಣಿಗಲ್ ತಾಲೂಕು ಯಡೆಯೂರು ಹೋಬಳಿ ಜಲಧಿಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಶಂಕುಸ್ಥಾಪನಾ ಸಮಾರಂಭ ಮೇ 31 ರಂದು ಬೆಳಗ್ಗೆ 10-30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಜಿ ಕಪ್ಪಣ್ಣ ತಿಳಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದೆ ಡಾ. ಬಿ. ಜಯಶ್ರೀ ಅವರ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾಗಿರುವ ಹಣದಲ್ಲಿ ಶಾಲಾ ಕಟ್ಟಡ ಕಟ್ಟಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಒಟ್ಟು 34 ಲಕ್ಷ ರು. ವೆಚ್ಚದಲ್ಲಿ ಶಾಲೆಯನ್ನು ನಿರ್ಮಿಸಲಾಗುವುದು. 4 ಕೊಠಡಿಗಳ ನಿರ್ಮಾಣ ಸೇರಿದಂತೆ ಒಟ್ಟು ಮಾದರಿ ಶಾಲೆಯಾಗಿ ರೂಪಿಸುವ ಹಿನ್ನೆಲೆಯಲ್ಲಿ ಶೌಚಾಲಯ, ಕಂಪ್ಯೂಟರ್ ಕೊಠಡಿ, ಕುಡಿಯುವ ನೀರು ಸೇರಿದಂತೆ ಇತರೆ ವಿಷಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಮಂಗಳೂರಿನಿಂದ ಶಾಲಾ ಕೊಠಡಿಗಳಿಗೆ ಡಿಸೈನ್ ಮಾಡಿಸಲಾಗುವುದು. ನಿರ್ಮಾಣದ ಉಸ್ತುವಾರಿಯನ್ನು ತುಮಕೂರು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗುವುದು. ಒಟ್ಟಾರೆ ಒಂದು ಸುಸಜ್ಜಿತ ಶಾಲೆಯನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು. ಶಾಲಾ ನಿರ್ಮಾಣದ ನಂತರ ಕಟ್ಟಡದ ಗುಣಮಟ್ಟ ಪರೀಕ್ಷಿಸಲಾಗುವುದು ಎಂದು ಕಪ್ಪಣ್ಣ ತಿಳಿಸಿದರು.
ಶಂಕುಸ್ಥಾಪನೆಯನ್ನು ಮೇ 31 ರಂದು ಬೆಳಗ್ಗೆ 10-30 ಕ್ಕೆ ಸಂಸದೆ ಜಯಶ್ರೀ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕುಣಿಗಲ್ ಶಾಸಕ ಡಿ. ನಾಗರಾಜಯ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

