ತುಮಕೂರು

ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

Published On :

ತುರುವೇಕೆರೆ: ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ 2013-14 ನೇ ಸಾಲಿಗೆ ಪ್ರವೇಶಾವಕಾಶ ಕಲ್ಪಿಸಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ 10 ನೇ ತರಗತಿಯ ವರೆಗೆ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ-1,2ಎ, 2ಬಿ, 3ಎ,3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಬೋಧನಾ ಸೌಲಭ್ಯ, ಹಾಸಿಗೆ, ವೈದ್ಯಕೀಯ ಸೌಲಭ್ಯ ಮುಂತಾದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ತುರುವೇಕೆರೆಯ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಬಾಲಕರ ವಿದ್ಯಾರ್ಥಿ ನಿಲಯ, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಣಸಂದ್ರ, ಮಾಯಸಂದ್ರ, ಶೆಟ್ಟಿಗೊಂಡನಹಳ್ಳಿ, ಸೀಗೆಹಳ್ಳಿ, ದಂಡಿನಶಿವರ, ದಬ್ಬೇಘಟ್ಟ ದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ಕೆಜಿಬಿವಿ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ: ತಾಲೂಕಿನ ದಬ್ಬೇಘಟ್ಟದಲ್ಲಿರುವ ಕಸ್ತೂರ ಬಾ ಗಾಂಧಿ ವಸತಿ ನಿಲಯಕ್ಕೆ 2013 -14 ನೇ ಸಾಲಿಗೆ 6 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು, ಶಾಲೆ ಬಿಟ್ಟ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ ಮತ್ತು ಇತರೆ ಹಿಂದುಳಿದ ವರ್ಗಗಳ ಹೆಣ್ಣು ಮಕ್ಕಳ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಯ್ಯ ತಿಳಿಸಿದ್ದಾರೆ. 50 ಮಕ್ಕಳಿಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಟಿ.ಮಂಜುನಾಥ್, ಮುಖ್ಯೋಪಾಧ್ಯಾಯರು ಸರ್ಕಾರಿ ಪ್ರೌಢಶಾಲೆ ದಬ್ಬೇಘಟ್ಟ, ದಬ್ಬೇಘಟ್ಟ ಶಿಕ್ಷಣ ಸಂಯೋಜಕ ಪಿ.ಸಿದ್ದಪ್ಪ, ಸರ್ಕಾರಿ ಪ್ರಾಥಮಿಕ ಪಾಠಶಾಲಾ ಮುಖ್ಯೋಪಧ್ಯಾಯ ಶಿವಶಂಕರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕ:ಕೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ದೂರವಾಣಿ ಸಂಖ್ಯೆ - 9743174946, 9448332597, 08139 287405 ಗೆ ಸಂಪರ್ಕಿಸಲು ಕೋರಲಾಗಿದೆ. ದಬ್ಬೇಘಟ್ಟದ ಕಸ್ತೂರ ಬಾ ಬಾಲಿಕಾ ವಸತಿ ನಿಲಯದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಪಿಸಿಎಂಬಿ.ಎಸ್ಸಿ.ಬಿ.ಇಡಿ ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗಿದೆ. ಆಸಕ್ತರು ಕೂಡಲೇ ಬಿಇಓ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.