ತುಮಕೂರು

153 ದೇವಾಲಯ ಜೀರ್ಣೋದ್ಧಾರ: ವೀರೇಂದ್ರ ಹೆಗ್ಗಡೆ

Published On :

ಕ.ಪ್ರ. ವಾರ್ತೆ ಟಿ ಹಾಸನ ಟಿ ಮೇ 31
ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಇದುವರೆಗೆ ಜಿಲ್ಲೆಯಲ್ಲಿ 27 ದೇವಾಲಯ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ನಗರದ ತಣ್ಣೀರುಹಳ್ಳದ ಬಳಿ ಇರುವ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆವರಣದಲ್ಲಿ ಗುರುವಾರ ನಡೆದ ಹಳ್ಳದ ರಾಮೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ರಾಜ್ಯದ 170 ದೇವಾಲಯಗಳಲ್ಲಿ 153 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ಇನ್ನು 17 ದೇವಾಲಯಗಳ ಜೀರ್ಣೋದ್ಧಾರ ಕಾಮಗಾರಿ ಬಾಕಿ ಇದೆ ಎಂದು ಹೇಳಿದರು.
ಮನುಷ್ಯನ ಬದುಕಿನಲ್ಲಿ ದೇವಾಲಯಗಳ ಪಾತ್ರ ಮುಖ್ಯವಾದುದು. ದೇವರು ಜೀವಂತವಾಗಿ ಮನಸಿನಲ್ಲಿ ಶಾಶ್ವತವಾಗಿ ಇರುತ್ತಾನೆ. ಯಾರು ಭಗವಂತನನ್ನು ಪ್ರಾರ್ಥಿಸುತ್ತಾರೆ ಅವರಲ್ಲಿ ಅವರಿಸಿಕೊಳ್ಳುತ್ತಾನೆ ಎಂದು  ಹೇಳಿದರು.
ಆಯುರ್ವೇದ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಬರಬೇಕು ಎನ್ನುವ ದೃಷ್ಟಿಯಲ್ಲಿ ಸೇವೆ ಸಲ್ಲಿಸಲಾಗುತ್ತಿದೆ.  ನಮಗೆ ಯಾವುದೇ ಪಕ್ಷ ಹಾಗೂ ಜಾತಿ ಮುಖ್ಯವಲ್ಲ, ಮನುಷ್ಯ ಎಂಬ ದೃಷ್ಟಿಯಲ್ಲಿ ನೋಡುತ್ತೇವೆ ಎಂದು ತಿಳಿಸಿದರು.
ದೇವಾಲಯದ ಉದ್ಘಾಟನೆ ನೆರವೇರಿಸಿದ ಶಾಸಕ ಎಚ್.ಎಸ್.ಪ್ರಕಾಶ್ ಮಾತನಾಡಿದರು.
ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್, ಸರ್ಕಾರದ ಅಲ್ಪ ಹಣವನ್ನು ಪಡೆದು ಉಳಿದ ಹಣವನ್ನು ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ಭರಿಸಿ ಇಂತಹ ಕಾರ್ಯ ಮಾಡುತ್ತಿರುವುದು ಅಪರೂಪದ ಕೆಲಸ ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ  ಅಂಬಿಕಾ ರಾಮಣ್ಣ, ಶ್ರೀ ಧರ್ಮೋತ್ಥಾನ ಟ್ರಸ್ಟ್ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಹರ್ಷೇ ದ್ರ ಕುಮಾರ್, ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ಗೋವಿಂದರಾಜ ಶೆಟ್ಟಿ, ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಸನ್ನ.ಎನ್.ರಾವ್, ಗೋಪಾಲಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ಚನ್ನವೀರಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಚಂದ್ರೇಗೌಡ, ಭಾರತೀಯ ಜೈನ್ ಸಂಘಟನೆಯ ಅಧ್ಯಕ್ಷ ಮಹಾವೀರ್ ಬನ್ಸಾಲಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.