ಪ್ರೆಸಿಡೆನ್ಸಿ ಕಾಲೇಜುವಿದ್ಯಾರ್ಥಿಗಳಅದ್ವಿತೀಯ ಸಾಧನೆ
ಶಿರಾ: 2012-13ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ ಕೋರ್ಸ್ಗಳಿಗೆ ಮೇ ತಿಂಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಶಿರಾ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. ಕಾಲೇಜಿನ ಸುಮಾರು 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆಯುವುದರೊಂದಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರಿ ಕೋಟದಲ್ಲಿ ಅರ್ಹತೆ ಪಡೆದಿರುತ್ತಾರೆ. ಹಾಗೂ ನೂರಾರು ವಿದ್ಯಾರ್ಥಿಗಳು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರ್ಹತೆ ಗಳಿಸಿರುತ್ತಾರೆ. ಅನುರಾಧ ಕೆ. ಇವರು ವೈದ್ಯಕೀಯ ವಿಭಾಗದಲ್ಲಿ 597 ನೇ ರ್ಯಾಂಕ್ ಪಡೆದಿರುತ್ತಾರೆ. ಕಾಲೇಜಿನ ಉಪನ್ಯಾಸಕರು ನೀಡಿದ ನಿರಂತರ ಸಿ.ಇ.ಟಿ. ತರಬೇತಿ ಮತ್ತು ಬೆಂಗಳೂರಿನ ಬಿ.ಎ.ಎಸ್.ಇ., ಸಿ.ಇ.ಟಿ, ಸಿ.ಇ.ಎನ್.ಟಿ.ಆರ್.ಇ. ರವರ ಸಹಯೋಗದೊಂದಿಗೆ ನಿರಂತರವಾಗಿ ನಡೆಸಿದ ಟೆಸ್ಟ್ಗಳು ಈ ಸಾಧನೆಗೆ ಕಾರಣವಾಗಿದೆ. ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ. ಈ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಸಂಸ್ಥೆಯ ಅಧ್ಯಕ್ಷ ಎಂ.ಚಿದಾನಂದ್ ಅವರು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಸಿ.ಇ.ಟಿ. ಎನ್.ಇ.ಇ.ಟಿ., ಐ.ಎಸ್.ಇ.ಇ.ಟಿ. ಇತ್ಯಾದಿ ಪ್ರವೇಶ ಪರೀಕ್ಷೆಗಳನ್ನು ಇನ್ನೂ ಹೆಚ್ಚಿನ ಒತ್ತು ಕೊಟ್ಟು ಅಗತ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಒದಗಿಸಿಕೊಟ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಸಾಧ್ಯವಿರುವ ಎಲ್ಲಾ ಪ್ರಯತ್ನ ನಮ್ಮ ಕಾಲೇಜಿನಿಂದ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನೌಕರನಿಗೆ ಬೀಳ್ಕೊಡುಗೆ
ಪಾವಗಡ: ಸರ್ಕಾರಿ ದಿನಗೂಲಿ ನೌಕರರ ಸಂಘದ ಹಿರಿಯ ಮುಖಂಡ ಲೋಕೋಪಯೋಗಿ ಇಲಾಖೆಯಲ್ಲಿ ಗ್ಯಾಂಗ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ವೆಂಕಟಾಪುರ ಗ್ರಾಮದ ವಿ.ಆರ್.ಅಂಜನಪ್ಪ ಸರ್ಕಾರಿ ಸೇವೆಯಿಂದ ನಿವೃತ್ತರಾದ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಡಿ.ಗ್ರೂಪ್ ನೌಕರರ ಸಂಘದ ವತಿಯಿಂದ ಅವರಿಗೆ ಬಿಳ್ಕೋಡುಗೆ ಸಮಾರಂಭ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ತಾಲೂಕು ಡಿ.ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಲೋಕೋಪಯೋಗಿ ಇಲಾಖೆಯ ಐ.ಬಿ.ಗೋವಿಂದಪ್ಪ ಮಾತನಾಡಿ, ವಿ.ಆರ್ ಅಂಜನಪ್ಪ ತಮ್ಮ ಸೇವಾ ಅವಧಿಯಲ್ಲಿ ತಮ್ಮ ಕುಟುಂಬದ ಶ್ರಯಸ್ಸಿಗಿಂತ ಡಿ.ಗ್ರೂಪ್ ನೌಕರರ ಶ್ರಯಸ್ಸಿಗೆ ದುಡಿದವರು. ದಿನಗೂಲಿ ನೌಕರರ ಸಮಸ್ಯೆ ನಿವಾರಣೆಗೆ ಆನೇಕ ಹೋರಾಟಗಳಲ್ಲಿ ಮುಂಚೂಣಿ ವಹಿಸಿ ಕೆಲಸ ಮಾಡುತ್ತಿದ್ದರು ಎಂದರು. ವಿ.ಆರ್.ಅಂಜನಪ್ಪ ಮಾತನಾಡಿ, ತಮ್ಮ ಅವಧಿಯಲ್ಲಿ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ ಅಧಿಕಾರಿಗಳಿಗೆ ಹಾಗೂ ಡಿ. ಗ್ರೂಪ್ ನೌಕರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ನೌಕರರಾದ ರೊಪ್ಪ ಹನುಮಂತು, ರಾಮಪ್ಪ, ರಾಮಾಂಜಿನಪ್ಪ ಮಾತನಾಡಿದ ರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

