ತುಮಕೂರು

'ಸರ್ಕಾರಿ ಸವಲತ್ತು ಸದುಪಯೋಗವಾಗಲಿ'

Published On :

ಗುಬ್ಬಿ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಸರ್ಕಾರ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಂತೆ ಮುಖ್ಯ ಶಿಕ್ಷಕ ಹೆಚ್.ಕರಿಯಪ್ಪ ಕರೆ ನೀಡಿದರು.
ಗುಬ್ಬಿ ತಾಲೂಕು ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅವರು ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ವಿದ್ಯಾರ್ಥಿ ವೇತನ, ಸಮವಸ್ತ್ರ, ಬೈಸಿಕಲ್, ಎಸ್.ಎಸ್.ಎಲ್.ಸಿ. ಪರೀಕ್ಷಯಲ್ಲಿ ಅತ್ಯುನ್ನತ ಶ್ರೇಣಿ.ಲ್ಲಿ ತೇರ್ಗಡೆಯಾದ ವಿಧ್ಯಾರ್ಥಿಗಳಿಗೆ ಪ್ರೋತ್ಸಾದಾಯಕ ಯೋಜನೆ ನೀಡಲಾಗುತ್ತಿದೆ. ವಿಧ್ಯಾರ್ಥಿಗಳು ಇಲಾಖೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದುವಂತೆ ತಿಳಿಸಿದರು. ಅಧ್ಯಾಪಕರಾದ ಗಿರಿರಾಜು, ನಟರಾಜು, ಸಂಜೀವಯ್ಯ, ಮಹಾಲಿಂಗಯ್ಯ,ನರಸಿಂಹಮೂರ್ತಿ, ಚೇತನ, ಜಯಶ್ರೀಯಂಡೀಗೇರಿ, ಉಮಾಶಂಕರ್, ಜಹೀರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.