ಇಂದು ಪಿಂಚಣಿ ಅದಾಲತ್
ಶಿರಾ: ತಾಲೂಕಿನ ಕಸಬಾ ಹೋಬಳಿಯ ಗುಳಿಗೇನಹಳ್ಳಿ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ನ.22ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಏರ್ಪಡಿಸಲಾಗಿದ್ದು, ಕಸಬಾ ಹೋಬಳಿಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಕುಲಕರ್ಣಿ ಅವರು ತಿಳಿಸಿದ್ದಾರೆ.
ಡಿ.11ರಿಂದ ಕೃತಕ ಕಾಲು ಜೋಡಣೆ ಶಿಬಿರ
ಶಿರಾ: ರಾಜ್ಯದ ಗಡಿ ಅಮರಾಪುರ ಗ್ರಾಮದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೇಸರಿಚಂದ್ ಪೂನಂಚಂದ್ ಸೇಥಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಡಿ.11ರಿಂದ 17ರವರೆಗೆ ಉಚಿತ ಕೃತಕ ಕಾಲು ಜೋಡಣೆ ಶಿಬಿರವನ್ನು ಏರ್ಪಡಿಸಲಾಗಿದ್ದು, ಸದರಿ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ನ.30ರೊಳಗೆ ಮೊ. 94403 32554, 94411 43504, 94921 51270, 94400 95116 ಇವರಲ್ಲಿ ನೋಂದಾಯಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಹಿತರಕ್ಷಣಾ ಸಮಿತಿ ಸಭೆ 25ರಂದು
ಶಿರಾ: ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ನ.25ರಂದು ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಕಚೇರಿಯಲ್ಲಿ ಕರೆಯಲಾಗಿದ್ದು, ಸದರಿ ಸಭೆಗೆ ದಲಿತ ಪ್ರತಿನಿಧಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ನಿಯೋಜಿಸದೆ ತಾವೇ ಖುದ್ದಾಗಿ ಹಾಜರಾಗಲು ತಹಸೀಲ್ದಾರ್ ಕುಲಕರ್ಣಿ ಅವರು ತಿಳಿಸಿದ್ದಾರೆ. ಪ. ಜಾತಿ ಮತ್ತು ಪ. ವರ್ಗಗಳ ಸಂಘ- ಸಂಸ್ಥೆಗಳ ಮುಖಂಡರು ತಮ್ಮ ಕುಂದುಕೊರತೆಗಳ ಬಗ್ಗೆ ಬೇಡಿಕೆಗಳನ್ನು ನ.23ರಂದು ಸಂಜೆ 5.30ರೊಳಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಲಿಖಿತವಾಗಿ ಮನವಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
24ರಂದು ಕನ್ನಡ ರಾಜ್ಯೋತ್ಸವ
ಶಿರಾ: ತಾಲೂಕಿನ ದ್ವಾರನಕುಂಟೆ ಗ್ರಾಮದ ಗ್ರಾಪಂ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನ.24ರಂದು ಬೆಳಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಕಸಾಪ ಅಧ್ಯಕ್ಷ ನರೇಶ್ಬಾಬು ನೆರವೇರಿಸಲಿದ್ದು, ಗ್ರಾಪಂ ಅಧ್ಯಕ್ಷೆ ಮಂಜುಳ ನಾಗರಾಜು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಆರ್.ಎಸ್. ನಾಗರಾಜು, ತಹಸೀಲ್ದಾರ್ ಎಸ್.ಬಿ. ಕುಲಕರ್ಣಿ, ಬಿಇಒ ರಾಜ್ಕುಮಾರ್ ಮತ್ತಿತರರು ಹಾಜರಿರುತ್ತಾರೆ ಎಂದು ಗ್ರಾಮದ ಮುಖಂಡ ರಾಜು ಡಿ. ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

