ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ
ಶಿರಾ: ಶಿರಾದ ಗ್ಲೋಬಲ್ ವೆಲ್ಫೇರ್ ಆರ್ಗನೈಜೇಷನ್ ಅವರು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನಗರದ ಅಲ್ ಅಮೀನ್ ಪಾಠಶಾಲೆ ಹತ್ತಿರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದ್ದರು. ನಗರ ಠಾಣಾ ಎಸ್ಐ ಕೊಟ್ರೇಶ್ ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಅಮೀರ್ ಜಾನ್ ಮಾತನಾಡಿ, ನಮ್ಮ ಸಂಸ್ಥೆಯು ನಾಲ್ಕು ವರ್ಷದಲ್ಲಿ 12 ಶಿಬಿರಗಳನ್ನು ನಡೆಸಿದ್ದು ಈವರೆಗೆ 2997 ಜನರಿಗೆ ನೇತ್ರ ತಪಾಸಣೆ ನಡೆಸಿ 350 ಪುರುಷ, 450 ಮಹಿಳೆ, 35 ಮಕ್ಕಳು ಒಟ್ಟು 835 ಜನರಿಗೆ ನೇತ್ರ ಚಿಕಿತ್ಸೆ ಕೊಡಿಸಿ ಮರು ದೃಷ್ಟಿ ನೀಡಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸದರಿ ಶಿಬಿರದಲ್ಲಿ 133 ಜನರಿಗೆ ತಪಾಸಣೆ ನಡೆಸಿ ಒಟ್ಟು 24 ಜನರಿಗೆ ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದರು. ಶಿಬಿರದಲ್ಲಿ ನೇತ್ರ ತಜ್ಞ ಡಾ. ಉಷಾ, ನಗರಸಭೆ ಸದಸ್ಯ ಹಬೀಬ್ ಖಾನ್, ಶಾಲೆಯ ಮುಖ್ಯೋಪಾಧ್ಯಾಯ ಮುನಾವರ್ ಪಾಷ, ಅಧ್ಯಕ್ಷ ದಿಲ್ದಾರ್, ನಾಸೀರ್ ಖಾನ್, ಸಂಸ್ಥೆಯ ಅಧ್ಯಕ್ಷ ಅಮೀರ್ ಜಾನ್, ಅಬ್ದುಲ್ ಖಾದರ್, ನಗರಸಭೆ ಸದಸ್ಯ ನಜೀರ್ ಅಹಮದ್, ಮತ್ತಿತರರು ಹಾಜರಿದ್ದರು.
ನಾಳೆ ಕರವೇಯಿಂದ ಕನ್ನಡ ರಾಜ್ಯೋತ್ಸವ
ತಿಪಟೂರು: ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭವು ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ನ.23ರಂದು ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಮಾಜಿ ಶಾಸಕ ಬಿ.ಸಿ. ನಾಗೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಜೆಪಿ ಮುಖಂಡ ಲೋಕೇಶ್ವರ ಮೆರವಣಿಗೆಗೆ ಚಾಲನೆ ನೀಡಲಿದ್ದು, ಶಾಸಕ ಕೆ. ಷಡಕ್ಷರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರವೇ ರಾಜ್ಯಾಧ್ಯಕ್ಷ ಆರ್. ವಿಜಯಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ. ಕೃಷ್ಣಪ್ಪ, ಸಂಸದ ಜಿ.ಎಸ್. ಬಸವರಾಜು ಮತ್ತಿತರರು ಭಾಗವಹಿಸಲಿದ್ದಾರೆ. ಸಾಹಿತಿ ಕವಿತಾ ಕೃಷ್ಣ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿಯ ಅಂಬಾರಿ ಉತ್ಸವ ಮತ್ತು ತಾಲೂಕಿನ ನವಶಕ್ತಿ ದೇವತೆಗಳ ವೈಭವದ ಮೆರವಣಿಗೆಯನ್ನು ಏರ್ಪಡಿಸಲಾಗಿದೆ.
24ಕ್ಕೆ ಸಭೆ
ತುಮಕೂರು: ಚಿತ್ರದುರ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಭೆಯನ್ನು ನ.24ರಂದು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ತಮ್ಮ ಹೆಸರು ನೋಂದಾಯಿಸಿಕೊಂಡು ಪ್ರಧಾನ ಕಚೇರಿಗೆ ಕಳುಹಿಸುವುದರ ಮೂಲಕ ತಮಗೆ ದೊರೆಯಬಹುದು. ವಿವರಗಳಿಗೆ ನಾಸೀರುದ್ದಿನ್ ಮೊ. 90350 91693, ಮಾಲೂರಪ್ಪ 87108 75287 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

