ಮದ್ಯಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಪಣತೊಡಿ: ಶಾಸಕ ಶ್ರೀನಿವಾಸ್
ಗುಬ್ಬಿ: ಕುಡಿತದ ಚಟಕ್ಕೆ ದಾಸರಾಗುವವರನ್ನು ಇಂತಹ ಶಿಬಿರಕ್ಕೆ ಕರೆತಂದು ಅವರನ್ನು ಮದ್ಯಪಾನ ಮುಕ್ತರನ್ನಾಗಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಕೊಂಡೊಯ್ಯುವತ್ತ ಅವರ ಕುಟುಂಬ ವರ್ಗ ಪ್ರಯತ್ನ ಮಾಡಬೇಕೆಂದು ಶಾಸಕ ಎಸ್.ಆರ್. ಶ್ರೀನಿವಾಸ್ ಕರೆ ನೀಡಿದರು.
ಗುಬ್ಬಿ ಪಟ್ಟಣದ ವಾಸವಿ ಮಹಲ್ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 640ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕುಡಿತದ ಚಟಕ್ಕೆ ದಾಸರಾದವರು ಗ್ರಾಮೀಣ ಪ್ರದೇಶಗಳಲ್ಲಿ ಕ್ಲುಲ್ಲಕ ವಿಷಯಗಳಿಗೆ ಮನೆ ಮನೆಗಳ ನಡುವೆ ಗ್ರಾಮ ಗ್ರಾಮಗಳ ನಡುವೆ ವೈಷಮ್ಯ ಸೃಷ್ಟಿಸಿ ಸಂಘರ್ಷಕ್ಕೆ ಕಾರಣವಾಗಿವೆ. ಈ ನಿಟ್ಟಿನಲ್ಲಿ ಮದ್ಯಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣತೊಡಬೇಕಾಗಿದ್ದು, ಮದ್ಯಪಾನಿಗಳನ್ನು ಹಂತ ಹಂತವಾಗಿ ದುಶ್ಚಟದಿಂದ ದೂರಮಾಡುವತ್ತ ಚಿಂತನೆ ನಡೆಸಬೇಕೆಂದು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಕಾರಗಳು ಮಾಡಲಾಗದಂತಹ ಮಹತ್ವಪೂರ್ಣ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ. ಮದ್ಯವರ್ಜನ ಶಿಬಿರಗಳನ್ನು ನಡೆಸುವ ಮೂಲಕ ಮದ್ಯ ವ್ಯಸನಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಮಹತ್ವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹ ಎಂದರು.
ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಮೋಜಿಗಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಬದುಕನ್ನೇ ಹಾಳು ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಎಂದರು.
ಬೆಟ್ಟದಹಳ್ಳಿ ಗವಿಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ದುಶ್ಚಟಗಳು ನಮ್ಮ ಸಾಮಾಜಿಕ ವ್ಯವಸ್ಥೆಯನ್ನೇ ಹಾಳು ಮಾಡುತ್ತಿವೆ. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ಚಿಂತನೆ ಮಾಡುವುದರ ಜೊತೆಗೆ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಕಲಿತ ದುಶ್ಚಟಗಳಿಂದ ಮುಕ್ತರಾಗಿ ಉತ್ತಮ ಬದುಕು ಸಾಗಿಸುವಂತೆ ಕರೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಡಿ. ಸುರೇಶ್ಗೌಡ, ಸದಸ್ಯರುಗಳಾದ ಸಿ. ಮೋಹನ್, ಜಿ.ಸಿ. ನರಸಿಂಹಮೂರ್ತಿ, ಶಿಬಿರದ ಗೌರವಾಧ್ಯಕ್ಷ ಕೆ.ಎಲ್. ಗೋಪಾಲಕೃಷ್ಣ ಶೆಟ್ಟಿ, ಅಧ್ಯಕ್ಷ ಧರಣೇಂದ್ರಕುಮಾರ್, ತುಮಕೂರು ಜಿಲ್ಲಾ ನಿರ್ದೇಶಕ ಪಿ. ಗಂಗಾಧರ್, ಪ್ರವೀಣ್ಕುಮಾರ್, ಶಿಬಿರಾಧಿಕಾರಿ ರಾಘವೇಂದ್ರ ಆಚಾರ್ಯ, ಮೇಲ್ವಿಚಾಕರ ಸುಬ್ರಹ್ಮಣ್ಯ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

