ತಿಪಟೂರು: ಮರ ಹತ್ತುವ ಸಾಧನ ಪ್ರಾತ್ಯಕ್ಷಿಕೆ ತರಬೇತಿ
ತಿಪಟೂರು: ತಾಲೂಕಿನ ಬಿದರೆಗುಡಿ ಕಾವಲ್ನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಘದ ವತಿಯಿಂದ ತೆಂಗಿನಲ್ಲಿ ಸುಧಾರಿತ ಬೇಸಾಯ ಕ್ರಮಗಳು ಮತ್ತು ಮರ ಹತ್ತುವ ಸಾಧನ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗಿನಲ್ಲಿ ಉತ್ಪಾದನಾ ತಾಂತ್ರಿಕತೆಗಳು, ಮಣ್ಣು, ನೀರು ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ವಿವಿಧ ವಿಷಯಗಳನ್ನು ತಿಳಿಸಲಾಯಿತು. ಮರ ಹತ್ತುವ ಸಾಧನ ಉಪಯೋಗಿಸಿ ತೆಂಗಿನ ಮರ ಹತ್ತುವ ಕೌಶಲ್ಯವನ್ನು ಸಹ ತಿಳಿಸಿಕೊಡಲಾಯಿತು. ಕೇಂದ್ರದ ಮುಖ್ಯಸ್ಥ ಡಾ. ಜಿ.ಎಂ. ಸುಜಿತ್, ವಿಜ್ಞಾನಿಗಳಾದ ಡಾ. ನಾಗಪ್ಪ ದೇಸಾಯಿ, ಡಾ. ಶ್ರೀನಿವಾಸ್, ಡಾ. ಶಂಕರ್, ಡಾ. ಮಮತಾ, ಡಾ. ರೂಪ ಬಿ. ಪಾಟೀಲ್, ಡಾ. ಶಿವಪ್ಪ ನಾಯಕ ಹಾಗೂ ನುರಿತ ತಜ್ಞ ಹೇಮಂತ್ ಸೇರಿದಂತೆ 20ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

