ತುಮಕೂರು

ಕಾರ್ತಿಕ ಮಾಸ ವಿಶೇಷ ಅಲಂಕಾರ

Published On :

ಗುಬ್ಬಿ: ಪಟ್ಟಣದ ಬೆಲ್ಲದ ಪೇಟೆಯಲ್ಲಿರುವ ಶ್ರೀ ರಾಮಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪಟ್ಟಣದ ಬೆಲ್ಲದ ಪೇಟೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ಶ್ರೀ ರಾಮಲಿಂಗೇಶ್ವರ ಸ್ವಾಮಿ ಹಾಗೂ  ಸೂರ್ಯನಾರಾಯಣ, ತಾಂಡವ ಗಣಪತಿ, ಸತ್ಯಗಣಪತಿ, ವೀರಭದ್ರಸ್ವಾಮಿ, ದಕ್ಷಿಣಾಮೂರ್ತಿ,  ಪಾರ್ವತಿ ಅಮ್ಮ, ಅಗಸ್ತ್ಯ ಮಹಾಋಷಿ, ಕಾಶಿ ವಿಶ್ವನಾಥಸ್ವಾಮಿ, ಚಂಡಿಕೇಶ್ವರ ಸ್ವಾಮಿ ಹಾಗೂ ನವಗ್ರಹ ದೇವರುಗಳಿಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳಾದ ಮಹಾನ್ಯಾಸ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಪ್ರಾಕಾರೋತ್ಸವ ನಂತರ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳಿಗೆ ವಿಶೇಷ ಪ್ರಸಾದ ವಿತರಣೆ ಮಾಡಲಾಯಿತು.

ಇಂದು ವೈಭವದ ಲಕ್ಷ ದೀಪೋತ್ಸವ
ಗುಬ್ಬಿ: ತಾಲೂಕಿನ ಚೇಳೂರಿನ ಗುರುಸಂಗವೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 25 ರಂದು ಲಕ್ಷ ದೀಪೋತ್ಸವ ಏರ್ಪಡಿಸಲಾಗಿದೆ. ಲಕ್ಷ ದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ದೇವಾಲಯದಲ್ಲಿ ರುದ್ರಾಭಿಷೇಕ, ಕಳಸ್ಥಾಪನೆ ನಡೆಯಲಿದ್ದು ನಂತರ ಸಂಜೆ ಬೆಟ್ಟದಹಳ್ಳಿ ಗವಿಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ದೀಪೋತ್ಸವ ಉದ್ಘಾಟಿಸುವರು. ಸಂಸದ ಜಿ.ಎಸ್.ಬಸವರಾಜು ಅಧ್ಯಕ್ಷತೆ ವಹಿಸುವರು. ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಗ್ರಾ.ಪಂ.ಅಧ್ಯಕ್ಷೆ ದೊಡ್ಡಮ್ಮ, ಸಿ.ಎಂ.ಹಿತೇಶ್ ಮತ್ತಿತರರು ಭಾಗವಹಿಸುವರು. ದೀಪೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಶ್ರೀ ಮಲ್ಲಿಕಾರ್ಜುನ ಶಾಲೆ ಆವರಣದಲ್ಲಿ ದಾಸೋಹ ವ್ಯವಸ್ಧೆ ಮಾಡಲಾಗಿದೆ. ರಾತ್ರಿ 9 ಕ್ಕೆ  ಗುರುಸಂಗವೇಶ್ವರ ಕೃಪಾಪೋಷಿತ ನಾಟಕ ಮಂಡಲಿಯಿಂದ ಹೆಚ್.ಸಿ.ಜಗದೀಶ್ ನಿರ್ದೇಶನದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ ಏರ್ಪಡಿಸಲಾಗಿದೆ. ರಾತ್ರಿ 1.30 ಕ್ಕೆ ಶ್ರೀಸ್ವಾಮಿ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.

3 ಪದಕ ಗಳಿಸಿದ ಕೆಐಟಿ ಕಾಲೇಜು
ತಿಪಟೂರು: ಶಿವಮೊಗ್ಗದ ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಅಥ್ಲೆಟಿಕ್ ಕೂಟದಲ್ಲಿ ತಿಪಟೂರಿನಲ್ಲಿ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ  ಟಿ.ಎಂ.ದೀಪು ಎಂಬ ವಿದ್ಯಾರ್ಥಿ ಹಾಫ್ ಮ್ಯಾರಥಾನ್ ಓಟದಲ್ಲಿ ಚಿನ್ನದ ಪದಕವನ್ನು ಮತ್ತು 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದು, ಮತ್ತೊಬ್ಬ ವಿದ್ಯಾರ್ಥಿ ಎಚ್.ಪಿ.ವಿವೇಕ್ 1500 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ವಿಜೇತರಾಗುವ ಮೂಲಕ ಕಾಲೇಜಿಗೆ ಉತ್ತಮ ಹೆಸರನ್ನು ತಂದುಕೊಟ್ಟಿದ್ದಾರೆಂದು ಪ್ರಾಂಶುಪಾಲ ಡಾ.ಎಸ್.ಎಂ. ಶಶಿಧರ್ ಸಂತೋಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.