ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಚಂದ್ರಶೇಖರ್
ತುಮಕೂರು: ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿ.ಸಿ.ಸಿ.ಬ್ಯಾಂಕಿನ ಉಪಾಧ್ಯಕ್ಷ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರ ಬೆಂಬಲಿಗ ಮಧುಗಿರಿಯ ಕೊಂಡವಾಡಿ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ಮಲ್ಲಸಂದ್ರದ ತುಮಕೂರು ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕೆಜೆಪಿ, ಕಾಂಗ್ರೆಸ್ ಬೆಂಬಲಿತ ಸದಸ್ಯರು, ನಾಮನಿರ್ದೇಶಿತ ಸದಸ್ಯ ಹಾಗೂ ಅಧಿಕಾರಿಗಳ ಮತಗಳನ್ನು ಪಡೆದ ಕೊಂಡವಾಡಿ ಚಂದ್ರಶೇಖರ್ 8 ಮತಗಳನ್ನು ಪಡೆದು ಆಯ್ಕೆಯಾದರೆ, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ರೇಣುಕಾಪ್ರಸಾದ್ 6 ಮತಗಳನ್ನು ಪಡೆದು ಪರಾಭವಗೊಂಡರು.
14 ಮಂದಿ ಮತದಾರರು: 14 ಜನ ಮತದಾರರನ್ನು ಒಳಗೊಂಡ ಹಾಲು ಒಕ್ಕೂಟದಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿತ ಒಕ್ಕೂಟದಲ್ಲಿ 3 ನಿರ್ದೇಶಕರು ಆಯ್ಕೆಯಾಗಿದ್ದರೆ, ಕಾಂಗ್ರೆಸ್ ಮತ್ತು ಕೆ.ಜೆ.ಪಿ. ಬೆಂಬಲಿತ ತಲಾ 2 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಉಳಿದಂತೆ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರು, ಕೆ.ಎಂ.ಎಫ್.ನ ಜಂಟಿ ನಿರ್ದೇಶಕರು ಹಾಗೂ ಸರಕಾರದ ನಾಮನಿರ್ದೇಶಿತ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದು, ಕೆ.ಜೆ.ಪಿಯ ಚಂದ್ರಶೇಖರ್, ಮಾಜಿ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಹಾಗೂ ಅಧಿಕಾರಿಗಳು ಮತ್ತು ನಾಮನಿರ್ದೇಶಿತ ಸದಸ್ಯರ ಬೆಂಬಲದಿಂದ 2 ಸ್ಥಾನ ಪಡೆದ ಕಾಂಗ್ರೆಸ್ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಂಡಿದೆ. ಅಲ್ಲದೆ ಮತ್ತೊಮ್ಮೆ ಸಹಕಾರಿ ಧುರೀಣ ಕೆ.ಎನ್.ರಾಜಣ್ಣ ಜಿಲ್ಲೆಯಲ್ಲಿ ತಮ್ಮ ಪ್ರಾಬಲ್ಯವನ್ನು ಮೆರೆದಿದ್ದಾರೆ.
ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವಾರದಿಂದಲೂ ಕೆ.ಜೆ.ಪಿ-ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮುಖಂಡರ ನಡುವೆ ಬಿರುಸಿನ ತಂತ್ರಗಾರಿಕೆ ನಡೆದಿತ್ತು. ಪರಸ್ಪರ ಎರಡು ಕಡೆಯವರು ಪ್ರಮುಖ ಮುಖಂಡರ ಮನೆಯಲ್ಲಿ ಕುಳಿತು ಚರ್ಚೆ ನಡೆಸುವ ಮೂಲಕ ಕೆಲ ಸದಸ್ಯರನ್ನು ತಮ್ಮತ್ತ ಸೆಳೆಯಲು ತಂತ್ರ ರೂಪಿಸಿದ್ದರು.ಅಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿರುವ ಸಂಸದ ಜಿ.ಎಸ್.ಬಸವರಾಜು ನಗರಸಭೆಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಕೈಜೋಡಿಸಿದಂತೆ ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿಯೂ ಕೈಜೋಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

